ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಿಂದ ನಿಖಿಲ್ ಕುಮಾರಸ್ವಾಮಿ ಔಟ್!
Recommended Video
ಮೈಸೂರು, ಜೂನ್ 16: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಕೂಡ ಸಮರ್ಥರು ಎಂದು ಎಚ್‌ಡಿ ವಿಶ್ವನಾಥ್ ಹೇಳಿದ್ದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ನಿಖಿಲ್ ಕುಮಾರಸ್ವಾಮಿ ಇಲ್ಲ ಎಂದು ಸಚಿವ ಜಿ.ಟಿ ದೇವೇಗೌಡ ಇಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ, 'ಎಚ್. ವಿಶ್ವನಾಥ್ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಅಂಗೀಕಾರ ಆದಮೇಲೆ ಬದಲಾವಣೆಯ ವಿಚಾರದ ಕಡೆ ಗಮನ ನೀಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಆಗುವವರೆಗೂ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡುವ ಮಾತೇ ಇಲ್ಲ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರ ರೇಸ್ನಲ್ಲಿ ಇಲ್ಲ. ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ಕೆಲವರು ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಬೇಕು' ಎಂದಿದ್ದಾರೆ.

ಲೋಕಸಭಾ ಚುನಾವಣೆ2019ರಲ್ಲಿ ಜೆಡಿಎಸ್ ಕೇವಲ ಒಂದು ಸ್ಥಾನ ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ್ದರು. ಸಚಿವ ಸ್ಥಾನ ಸಿಕ್ಕರೆ ನಿಭಾಯಿಸುವೆ ಎಂದಿದ್ದರು. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಕೂಡಾ ಸಮರ್ಥರು ಎಂದಿದ್ದರು.
ಎಚ್. ವಿಶ್ವನಾಥ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ವೈಎಸ್ ವಿ ದತ್ತ, ಮಧು ಬಂಗಾರಪ್ಪ, ಸಕಲೇಶಪುರದ ಶಾಸಕ ಎಚ್ ಕೆ ಕುಮಾರಸ್ವಾಮಿ ಅವರ ಹೆಸರು ಕೇಳಿ ಬಂದಿತ್ತು.












Click it and Unblock the Notifications