ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ: ವ್ಯಕ್ತಿ ಸಾವು
ಮೈಸೂರು: ಕರ್ನಾಟಕದ ಚಿತ್ರದುರ್ಗದಲ್ಲಿ ಗುರುವಾರ ಮುಂಜಾನೆ ತೀವ್ರ ರಸ್ತೆ ಅಪಘಾತ ಸಂಭವಿಸಿತ್ತು. ಇದೀಗ ಸಂಜೆ ಮೈಸೂರಿನಲ್ಲಿ ಮತ್ತೊಂದು ಭೀಕರ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರಿನ ಅರಮನೆಯ ಮುಂದೆ ಬಲೂನ್ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಬ್ಲಾಸ್ಟ್ನಿಂದಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರ ಸ್ಫೋಟದ ಸದ್ದಿನಿಂದ ಅರಮನೆ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಬ್ಲಾಸ್ಟ್ನಲ್ಲಿ ಗಾಯಗೊಂಡಿರುವವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅವಘಡದಲ್ಲಿ ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಬಲೂನ್ಗೆ ಗ್ಯಾಸ್ ತುಂಬುವ ವ್ಯಕ್ತಿಗೆ ಗಾಯವಾಗಿದ್ದು, ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಲಭ್ಯವಾಗಬೇಕಾಗಿದೆ.

ಇನ್ನು ಘಟನೆ ಸಂಭವಿಸಿದ ಸ್ಥಳಕ್ಕೆ ಮೈಸೂರಿನ ಕೃಷ್ಣರಾಜ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ಈ ಅವಘಡ ಸಂಭವಿಸಿದ್ದು, ಕೆಲ ಕ್ಷಣಗಳ ಕಾಲ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವಘಡದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯರ ನೆರವಿನೊಂದಿಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿರಾರು ಜನ ಸೇರಿದ್ದರು
ಇನ್ನು ಗುರುವಾರ (ಡಿಸೆಂಬರ್ 25)ರಂದು ಕ್ರಿಸ್ಮಸ್ ಹಾಗೂ ವರ್ಷಾಂತ್ಯದ ರಜೆ ಇರುವ ಹಿನ್ನೆಲೆಯಲ್ಲಿ ಅರಮನೆ ಹಾಗೂ ಅರಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿಗರು ಸೇರಿದಂತೆ ಸಾವಿರಾರು ಜನ ಸೇರಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದಿಂದ ವ್ಯಕ್ತಿಯೊಬ್ಬರ ಮೃತದೇಶ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಪೊಲೀಸರಿಂದ ಹೆಚ್ಚಿನ ತನಿಖೆ
ಇನ್ನು ಅರಮನೆ ಮೈದಾನದಲ್ಲಿ ಸಂಭವಿಸಿರುವ ಸಿಲಿಂಡರ್ ಸ್ಫೋಟಕ್ಕೆ ಸಂಭವಿಸಿದಂತೆ ಮೈಸೂರು ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ಈ ಸ್ಫೋಟಕ್ಕೆ ನಿಖರ ಕಾರಣ ಏನು ಎನ್ನುವುದಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications