ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡೈರಿ ಬಳಿಕ ಕಾಂಗ್ರೆಸ್ ನಲ್ಲಿ ಭಿನ್ನಮತವಿಲ್ಲ-ಸಚಿವ ಮಹದೇವಪ್ಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ. 26 : ಕಾಂಗ್ರೆಸ್ ಡೈರಿ ಬೆಳಕಿಗೆ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವಿನ ಬಿನ್ನಭಿಪ್ರಯವಿದೆ ಎಂಬುವುದಕ್ಕೆ ಲೋಕೋಪಯೋಗಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರ ನಡುವೆ ಮೈನಸ್ಸು ಉಂಟಾಗಿದೆ ಎಂಬ ವರದಿ ಸತ್ಯಕ್ಕೆ ದೂರವಾದುದು ಎಂದು ಹೇಳಿದರು.

No dissident between cm siddaramaiah and G Parameshwar ofter diary released says H C Mahadevappa

ಕೆಲ ಹಿರಿಯ ಸಚಿವರನ್ನು ಕೈಬಿಡುವ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರದಿಂದ ಹೈ ಕಮಾಂಡ್ ಗೆ ಕಪ್ಪ ನೀಡಿರುವ ವಿಚಾರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆ ಡೈರಿ ನನ್ನದಲ್ಲ ಮತ್ತು ಬರವಣಿಗೆಯೂ ನನ್ನದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೈರಿಯಲ್ಲಿರುವ ಇನ್ಷಿಯಲ್ ಗಳ ವಿಸ್ತರಣೆ ಅವರವರ ವಿವೇಚನೆಗೆ, ಭಾವಕ್ಕೆ ಬಿಟ್ಟದ್ದು. ಅದಕ್ಕೆಲ್ಲಾ ನಾನು ಸ್ಪಷ್ಟೀಕರಣ ನೀಡಲು ಸಾಧ್ಯವಿಲ್ಲ ಎಂದರು.

English summary
NO dissident in congress party gives clarify the public works department minister H C Mahadevappa in Mysuru on February 26. After congress diary released dissident between Chief Minister Siddaramaiah and KPCC President G Parameshwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X