ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 30: "ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ, ಮುಂದಿನ ಎರಡು ವರ್ಷ ಬಿ.ಎಸ್. ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ,'' ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Recommended Video

ಮುಖ್ಯಮಂತ್ರಿ ಬದಲಾವಣೆ ಮುಗಿದುಹೋದ ಅಧ್ಯಾಯ | Vijayendra | Oneindia Kannada

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಬಿ.ವೈ. ವಿಜಯೇಂದ್ರ, "ಮುಂದಿನ ಎರಡು ವರ್ಷ ಬಿಎಸ್‌ವೈ ಸಿಎಂ ಆಗಿರುತ್ತಾರೆ. ಇದನ್ನು ರಾಷ್ಟ್ರೀಯ ನಾಯಕರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಅನಗತ್ಯ,'' ಎಂದರು.

ಮುಗಿದಿಲ್ಲ ಬಿಜೆಪಿ ಬಿಕ್ಕಟ್ಟು; ಸಿಪಿ ಯೋಗೀಶ್ವರ್, ಯತ್ನಾಳ್ ಭೇಟಿ!ಮುಗಿದಿಲ್ಲ ಬಿಜೆಪಿ ಬಿಕ್ಕಟ್ಟು; ಸಿಪಿ ಯೋಗೀಶ್ವರ್, ಯತ್ನಾಳ್ ಭೇಟಿ!

ಹಲವು ಮುಖಂಡರು ದೆಹಲಿಗೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಜಯೇಂದ್ರ, "ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿ ಭೇಟಿ ಬಗ್ಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ,'' ಎಂದರು.

No Leadership Change In Karnataka BJP: BY Vijayendra

"ಇನ್ನು ನಾನು ಚುನಾವಣೆಗೆ ನಿಲ್ಲಬೇಕೋ ಬೇಡವೋ? ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತೆ. ನಾನು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು ಈಗ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ ಎಂದು,'' ತಿಳಿಸಿದರು.

"ಕಾಂಗ್ರೆಸ್‌ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದನ್ನು ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಾಸ್ಪದ. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯ ಮೆರೆದಿದ್ದಾರೆ. ಈ ರೀತಿ ಪರಿಹಾರ ನೀಡುತ್ತಿರುವುದು ದೇಶದಲ್ಲಿ ಮೊದಲು,'' ಎಂದು ಹೇಳಿದರು.

English summary
Next two years B.S. Yediyurappa will be Continuing as the CM, State BJP vice-president BY Vijayendra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X