ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆಯಿಲ್ಲ

|
Google Oneindia Kannada News

ಮೈಸೂರು, ಜೂ. 04 : 'ನಂದಿನಿ ಹಾಲಿನ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ, ಹಾಲಿನ ದರ ಏರಿಕೆ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ' ಎಂದು ಸಹಕಾರ ಸಚಿವರು ಸ್ಪಷ್ಟಪಡಿಸಿದ್ದಾರೆ. ಕೆಎಂಎಫ್ ಹಾಲಿನ ದರವನ್ನು 4 ರೂ. ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು.

ಮೈಸೂರಿನಲ್ಲಿ ಗುರುವಾರ ಮಾತನಾಡಿದ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು, 'ಹಾಲಿನ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು' ಎಂದರು. [ನಂದಿನಿ ಹಾಲಿನ ದರ 4 ರೂ. ಏರಿಕೆ?]

mahadeva prasad

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ್ದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌. ಜಯರಾಮ್ ಅವರು, ನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಾಲಿನ ದರವನ್ನು 4 ರೂ. ದರ ಹೆಚ್ಚಿಸಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದರು. [ಆನ್ ಲೈನ್ ಮೂಲಕ ನಂದಿನಿ ಹಾಲಿಗೆ ಬುಕ್ ಮಾಡಿ]

2014ರ ಡಿಸೆಂಬರ್‌ನಿಂದ ಕೆಎಂಎಫ್ ಎರಡು ಬಾರಿ ಸರ್ಕಾರಕ್ಕೆ ಹಾಲಿನ ದರ ಏರಿಕೆ ಮಾಡಲು ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ದರಿಂದ ದರ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿತ್ತು. ಸದ್ಯ ಸಚಿವರೇ ದರ ಹೆಚ್ಚಳವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. [ಮೊಸರಿನ ದರ ಎಷ್ಟಿದೆ ಗೊತ್ತೆ?]

English summary
Karnataka Cooperation minister H.S.Mahadeva Prasad on Thursday clarified that there is no proposal to increase the milk price at present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X