ಬಂದ್ ಮಾಡುವವರು ಸಂಪರ್ಕಿಸಿಯೇ ಇಲ್ಲ: ಕುರುಬೂರು
ಮೈಸೂರು, ಮೇ 27: ಕುಮಾರಸ್ವಾಮಿ ಅವರ ನೇತೃತದ ಸರ್ಕಾರ ಈಗ ತಾನೆ ಅಸ್ತಿತ್ವಕ್ಕೆ ಬಂದಿದೆ. ಈಗಲೇ ಸಾಲಮನ್ನಾ ಮಾಡುವಂತೆ ಒತ್ತಡ ಹೇರುವುದು ಸರಿಯಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಬಂದ್ ನಡೆಸುವವರಾರೂ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ನಾವು ಅದಕ್ಕೆ ಬೆಂಬಲ ನೀಡುವುದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡುತ್ತಾರೆ ಎಂಬ ವಿಶ್ವಾಸವಿದೆ.
ಅವರನ್ನು ಶೀಘ್ರದಲ್ಲಿಯೇ ಭೇಟಿ ಮಾಡಿ, ಸಾಲ ಮನ್ನಾ ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಹೇಳಿದ್ದರು. ಅವರು ತಕ್ಷಣ ಸಾಲ ಮನ್ನಾ ಮಾಡದೆ ಇದ್ದರೆ ಸೋಮವಾರ ಕರ್ನಾಟಕ ಬಂದ್ ನಡೆಸುವುದಾಗಿ ಸದನದಲ್ಲಿ ಹೇಳಿದ್ದರು.
ಆದರೆ, ರಾಜ್ಯ ರೈತ ಸಂಘ ಸೇರಿದಂತೆ ಬಹುತೇಕ ಸಂಘಟನೆಗಳು, ಸಂಸ್ಥೆಗಳು ರಾಜ್ಯ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿಕೆ ನೀಡಿವೆ.












Click it and Unblock the Notifications