ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಪ್ರವಾಹ ಪರಿಶೀಲನೆಗೆ ಪ್ರತಿ ತಾಲೂಕಿಗೂ ನೋಡಲ್ ಅಧಿಕಾರಿಗಳ ನಿಯೋಜನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 07: ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಆರಂಭವಾಗಿರುವ ಹಿನ್ನೆಲೆಯಲ್ಲಿ ಜನ ಮತ್ತು ಜಾನುವಾರುಗಳ ರಕ್ಷಣೆಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಮತ್ತು ಕೋವಿಡ್ ಹಿನ್ನೆಲೆಯಲ್ಲಿ ವಿಕೋಪ ನಿರ್ವಹಣೆ ಕುರಿತು ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲೂಕು ಟಾಸ್ಕ್ ಫೋರ್ಸ್ ಅಧಿಕಾರಿಗಳ ಪ್ರಗತಿ ಪರಿಶೀಲನೆ ಮಾಡಿದರು. ಮುಂದಿನ ಒಂದೆರೆಡು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಮಾಹಿತಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಬಹುದು. ಅಲ್ಲಿವರೆಗೂ ಕಾಯುವ ಬದಲು ಈಗಲೇ ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಮೈಸೂರು ಜಿಲ್ಲಾಧಿಕಾರಿಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಮೈಸೂರು ಜಿಲ್ಲಾಧಿಕಾರಿ

ಎಲ್ಲಾ ತಾಲೂಕುಗಳಿಗೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಅವರು ಆಗಾಗ್ಗೆ ತಾಲೂಕುಗಳಿಗೆ ಭೇಟಿ ನೀಡಿ, ನಿರ್ವಹಣೆ ಮಾಡಬೇಕು ಎಂದರು. ಜನರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಬೇಕು. ಜಾನುವಾರುಗಳಿಗೆ ಗೋಶಾಲೆಗಳನ್ನು ಮಾಡಬೇಕು. ಹಿಂದಿನ ವರ್ಷಗಳಲ್ಲಿ ನೀರು ನುಗ್ಗಿದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ಬೇಕಾಗುತ್ತದೆ. ಸ್ಥಳೀಯ ಶಾಸಕರು, ಸಂಸದರಿಗೆ ಮಾಹಿತಿ ನೀಡಿ ಸಹಕಾರ ಪಡೆಯಬೇಕು ಎಂದರು.

Mysuru: Nodal Officer Appointed For Flood Inspection

ಬೆಳೆ ಹಾನಿ, ಆಸ್ತಿ ಹಾನಿಯಾದರೆ ಸಮೀಕ್ಷೆ ನಡೆಸಿ ನಿಖರ ವರದಿ ಪಡೆಯಬೇಕು. ಗಾಳಿ ಮಳೆಗೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗುತ್ತವೆ. ಇದಕ್ಕೆ ತಕ್ಷಣ ಸರಿಪಡಿಸುವಂತೆ ಚೆಸ್ಕಂ ಸಿಬ್ಬಂದಿಗಳು ಸ್ಪಂದಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಯಾರೂ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ರಜೆ ತೆಗೆದುಕೊಳ್ಳಬಾರದು ಎಂದರು.

English summary
Nodal officers appointed for each taluks in mysuru to inspect flood situation
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X