ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ : ಎಚ್.ಸಿ.ಮಹದೇವಪ್ಪ
Recommended Video

ಮೈಸೂರು, ಜುಲೈ 12 : ಬಿಜೆಪಿ ಸೇರುವ ಕುರಿತಂತೆ ಹಬ್ಬಿದ್ದ ಸುದ್ದಿಗಳಿಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 'ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗುವುದಿಲ್ಲ' ಎಂದು ಅವರು ಹೇಳಿದರು.
ಗುರುವಾರ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಪ್ತ ಎಚ್.ಸಿ.ಮಹದೇವಪ್ಪ, 'ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿರುವ ಕೆಲವು ನಾಯಕರು ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಅವರೇ ಇಂತಹ ಸುದ್ದಿ ಹಬ್ಬಿಸುತ್ತಿದ್ದಾರೆ' ಎಂದರು.
'ಚುನಾವಣೆ ಸೋಲಿನ ಬಳಿಕ ದಿಗ್ಭ್ರಮೆಗೊಂಡಿದ್ದೆ. ಸೋಲಿನಿಂದ ಆಚೆ ಬರಲು ಒಂದೂವರೆ ತಿಂಗಳು ಬೇಕಾಯಿತು. ಬಿಜೆಪಿ ಸೇರುವ ಕುರಿತು ಹಬ್ಬಿರುವ ಸುದ್ದಿಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿಯೇ ಮಾತನಾಡುತ್ತೇನೆ' ಎಂದು ತಿಳಿಸಿದರು.

'ಅನಾರೋಗ್ಯದ ಹಿನ್ನಲೆಯಲ್ಲಿ ಪ್ರಕೃತಿ ಚಿಕಿತ್ಸೆಗೆ ತೆರಳಿದ್ದೆ. ಆದ್ದರಿಂದ, ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಸೇರಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ' ಎಂದು ಮಹದೇವಪ್ಪ ಸ್ಪಷ್ಟನೆ ನೀಡಿದರು.
2018ರ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಎಚ್.ಸಿ.ಮಹದೇವಪ್ಪ ಸೋಲು ಅನುಭವಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಎಂ.ಅಶ್ವಿನ್ ಕುಮಾರ್ ಅವರು ಗೆಲುವು ಸಾಧಿಸಿದ್ದರು. ಎರಡು ದಿನಗಳ ಹಿಂದೆ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.











Click it and Unblock the Notifications