ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನನ್ನ ಡೆಡ್ ಬಾಡಿ ಸಹ ಬಿಜೆಪಿಗೆ ಹೋಗುವುದಿಲ್ಲ : ಎಚ್.ಸಿ.ಮಹದೇವಪ್ಪ

By Yashaswini
|
Google Oneindia Kannada News

Recommended Video

ಬಿಜೆಪಿ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯನವರ ಆಪ್ತ ಎಚ್ ಸಿ ಮಹದೇವಪ್ಪ | Oneindia Kannada

ಮೈಸೂರು, ಜುಲೈ 12 : ಬಿಜೆಪಿ ಸೇರುವ ಕುರಿತಂತೆ ಹಬ್ಬಿದ್ದ ಸುದ್ದಿಗಳಿಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. 'ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗುವುದಿಲ್ಲ' ಎಂದು ಅವರು ಹೇಳಿದರು.

ಗುರುವಾರ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಪ್ತ ಎಚ್.ಸಿ.ಮಹದೇವಪ್ಪ, 'ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿರುವ ಕೆಲವು ನಾಯಕರು ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಅವರೇ ಇಂತಹ ಸುದ್ದಿ ಹಬ್ಬಿಸುತ್ತಿದ್ದಾರೆ' ಎಂದರು.

ಸಿದ್ದರಾಮಯ್ಯ ಆಪ್ತ ಎಚ್.ಸಿ.ಮಹದೇವಪ್ಪ ಬಿಜೆಪಿಗೆ?ಸಿದ್ದರಾಮಯ್ಯ ಆಪ್ತ ಎಚ್.ಸಿ.ಮಹದೇವಪ್ಪ ಬಿಜೆಪಿಗೆ?

'ಚುನಾವಣೆ ಸೋಲಿನ ಬಳಿಕ ದಿಗ್ಭ್ರಮೆಗೊಂಡಿದ್ದೆ. ಸೋಲಿನಿಂದ ಆಚೆ ಬರಲು ಒಂದೂವರೆ ತಿಂಗಳು ಬೇಕಾಯಿತು. ಬಿಜೆಪಿ ಸೇರುವ ಕುರಿತು ಹಬ್ಬಿರುವ ಸುದ್ದಿಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿಯೇ ಮಾತನಾಡುತ್ತೇನೆ' ಎಂದು ತಿಳಿಸಿದರು.

'ನನ್ನ ಸೋಲಿಗಿಂತ ಸಿದ್ದರಾಮಯ್ಯರ ಸೋಲು ನೋವುಂಟು ಮಾಡಿದೆ''ನನ್ನ ಸೋಲಿಗಿಂತ ಸಿದ್ದರಾಮಯ್ಯರ ಸೋಲು ನೋವುಂಟು ಮಾಡಿದೆ'

Not Joining BJp says former minister HC Mahadevappa

'ಅನಾರೋಗ್ಯದ ಹಿನ್ನಲೆಯಲ್ಲಿ ಪ್ರಕೃತಿ ಚಿಕಿತ್ಸೆಗೆ ತೆರಳಿದ್ದೆ. ಆದ್ದರಿಂದ, ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭ ಸೇರಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ' ಎಂದು ಮಹದೇವಪ್ಪ ಸ್ಪಷ್ಟನೆ ನೀಡಿದರು.

ಟಿ. ನರಸೀಪುರದಲ್ಲಿ ಮಹದೇವಪ್ಪಗೆ ಮುಖಭಂಗಟಿ. ನರಸೀಪುರದಲ್ಲಿ ಮಹದೇವಪ್ಪಗೆ ಮುಖಭಂಗ

2018ರ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಎಚ್.ಸಿ.ಮಹದೇವಪ್ಪ ಸೋಲು ಅನುಭವಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಎಂ.ಅಶ್ವಿನ್ ಕುಮಾರ್ ಅವರು ಗೆಲುವು ಸಾಧಿಸಿದ್ದರು. ಎರಡು ದಿನಗಳ ಹಿಂದೆ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

English summary
Former minister H.C.Mahadevappa clarified that he will not join BJP. On July 12, 2018 in Mysuru he said that he will not quit Congress. H.C.Mahadevappa lost 2018 Karnataka assembly elections from T.Narsipur constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X