ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸ್ತೆ ಮೇಲೆ ಒಕ್ಕಣೆ ಮಾಡುವ ರೈತರ ಮೇಲೆ ಕ್ರಿಮಿನಲ್ ಕೇಸು!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 18: ಈಗ ಒಕ್ಕಣೆ ಸಮಯವಾಗಿದ್ದು ರೈತರು ಸಾರ್ವಜನಿಕ ರಸ್ತೆಗಳ ಮೇಲೆ ಬೆಳೆಗಳನ್ನು ಒಕ್ಕಣೆ ಮಾಡಬಾರದು ಎಂದು ಲೋಕೋಪಯೋಗಿ ಇಲಾಖೆ ಎಚ್ಚರಿಕೆ ನೀಡಿದೆ. ನಿಯಮ ಉಲ್ಲಂಘನೆ ಮಾಡಿದರೆ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ತಿಳಿಸಲಾಗಿದೆ.

ಪಿರಿಯಾಪಟ್ಟಣ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ರೈತರು ಒಂದು ವೇಳೆ ಸೂಚನೆ ಉಲ್ಲಂಘಿಸಿ ಒಕ್ಕಣೆ ಮಾಡಿದರೆ ಮುಲಾಜಿಲ್ಲದೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸಲಾಗುವುದು" ಎಂದು ಹೇಳಿದ್ದಾರೆ.

ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಪತ್ರ ಬರೆದ ಮಂಡ್ಯದ ರೈತ: ಕಾರಣವೇನು?ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಪತ್ರ ಬರೆದ ಮಂಡ್ಯದ ರೈತ: ಕಾರಣವೇನು?

"ಸಾರ್ವಜನಿಕ ರಸ್ತೆಗಳಲ್ಲಿ ಒಕ್ಕಣೆ ಮಾಡುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ. ಅನೇಕ ಬಾರಿ ಒಣಗಿದ ಬೆಳೆಯು ವಾಹನಗಳ ಸೈಲೆನ್ಸರ್‌ಗೆ ತಗುಲಿ ಬೆಂಕಿ ಹೊತ್ತಿಕೊಂಡು ವಾಹನಗಳೇ ಉರಿದು ಹೋಗಿವೆ. ಅಲ್ಲದೆ ವಾಹನದಲ್ಲಿದ್ದವರೂ ಸಾವನ್ನಪ್ಪಿದ ಘಟನೆಗಳೂ ನಡೆದಿವೆ" ಎಂದು ಕುಮಾರ್ ತಿಳಿಸಿದ್ದಾರೆ.

ತುಂಡು ಜಮೀನು, ವಿವಿಧ ಬೆಳೆ; ಮಾದರಿಯಾದ ಕೋಲಾರದ ರೈತ ತುಂಡು ಜಮೀನು, ವಿವಿಧ ಬೆಳೆ; ಮಾದರಿಯಾದ ಕೋಲಾರದ ರೈತ

 Not Use Road For Harvest Crop PWD Department Warned Farmers

ಆದ್ದರಿಂದ, ರೈತರು ರಸ್ತೆಯ ಮೇಲೆ ಒಕ್ಕಣೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ. ರೈತರು ಒಕ್ಕಣೆ ಮಾಡುವುದು ಕಂಡು ಬಂದರೆ ವಾಹನ ಸವಾರರು, ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಲಾಗಿದೆ.

ತೈವಾನ್ ಚೇಪೆಕಾಯಿ ಬೇಸಾಯ; ಕಡಿಮೆ ಖರ್ಚು, ಹೆಚ್ಚು ಆದಾಯ ತೈವಾನ್ ಚೇಪೆಕಾಯಿ ಬೇಸಾಯ; ಕಡಿಮೆ ಖರ್ಚು, ಹೆಚ್ಚು ಆದಾಯ

ಪಿರಿಯಾಪಟ್ಟಣ ತಾಲೂಕಿನಲ್ಲಿ ಬಹುತೇಕ ಕಡೆಗಳಲ್ಲಿ ರೈತರು ಹುರುಳಿ, ರಾಗಿ, ಜೋಳ, ಭತ್ತ, ಅಲಸಂದೆ ಮುಂತಾದ ಬೆಳೆಗಳನ್ನು ಒಣಗಿಸಲು ರಸ್ತೆಗಳಲ್ಲಿ ಹರಡುತ್ತಾರೆ.‌ ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

Recommended Video

ಬೇವಿನಮರದಲ್ಲಿ ಹಾಲಿನ ನೊರೆ! ಪ್ರಕೃತಿ ವಿಸ್ಮಯ ನೋಡಲು ಸೇರಿದ ಜನ | Oneindia Kannada

ಬಿರು ಬಿಸಿಲಿನ ತಾಪಕ್ಕೆ ಕಾದ ರಸ್ತೆಗಳ ಮೇಲೆ ಬೆಳೆಗಳ ಒಕ್ಕಣೆ ಮಾಡುವುದರಿಂದ ಸಂಚರಿಸುವ ವಾಹನಗಳಿಗೆ ಬೇಗನೆ ಬೆಂಕಿ ಹೊತ್ತಿಕೊಂಡು ಪ್ರಾಣಾಪಾಯವಾಗುವ ಸಂಭವವಿರುತ್ತದೆ. ಆದ್ದರಿಂದ, ರೈತರು ಹೊಲಗಳಲ್ಲಿಯೇ ಬೆಳೆಗಳ ಒಕ್ಕಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

English summary
PWD department Mysuru warned farmers not to use road for harvest crop. Criminal case will file against farmers who using road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X