• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಾಕ್ ಡೌನ್ ಉಲ್ಲಂಘಿಸುವ ವಾಹನ ಸವಾರರಿಗೆ ನೋಟಿಸ್

By ಮೈಸೂರು ಪ್ರತಿನಿಧಿ
|

ಮೈಸೂರು, ಮಾರ್ಚ್ 31: ಕೊರೊನಾ ವೈರಸ್ ಮಹಾಮಾರಿ ಕಾಯಿಲೆ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಧಿಸಿರುವ ಲಾಕ್ ಡೌನ್ ನ್ನು ಉಲ್ಲಂಘಿಸಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಟ ನಡೆಸುತ್ತಿದ್ದವರಿಗೆ ಮೈಸೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಲಾಕ್ ಡೌನ್ ನಡುವೆಯೂ ನಗರದಲ್ಲಿ ಅಡ್ಡಾಡಿರುವ ವಾಹನ ಸವಾರರಿಗೆ ತಕ್ಕಪಾಠ ಕಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಮೈಸೂರು ನಗರದಲ್ಲಿ ಅಡ್ಡಾಡಿರುವ ಕಿಡಿಗೇಡಿಗಳ ವಾಹನ ಸಂಖ್ಯೆ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ ಈ ಸಂಬಂಧ ವಾಹನ ನೋಂದಣಿ ಸಂಖ್ಯೆ ಆಧಾರದ ಮೇಲೆ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಸೂಕ್ತ ಸಮಜಾಯಿಷಿ ನೀಡದಿದ್ದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.

English summary
Mysuru Police have decided to Lodged Case to motorists in the city despite the lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X