ಲೋಕಲ್ ವಾರ್ ಗೆ ಸಜ್ಜಾದ ಸಾಂಸ್ಕೃತಿಕ ನಗರಿ ಮೈಸೂರು
ಮೈಸೂರು, ಆಗಸ್ಟ್. 10 : ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ನಡೆಯಲಿರುವ ಮತ್ತೊಂದು ಮಿನಿ ಸಮರಕ್ಕೆ ಅಧಿಸೂಚನೆ ಹೊರಬಿದ್ದಿದ್ದು, ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್ ಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಯೋಗೀಶ್ ತಿಳಿಸಿದರು.
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಚುನಾವಣೆಗೆ ಸಜ್ಜಾಗಿದೆ. ಡಿಸಿ ಅಭಿರಾಂ ಜಿ.ಶಂಕರ್ ಅವರು ಅಧಿಸೂಚನೆ ಹೊರಡಿಸಲಿದ್ದು, ಆಯಾ ತಾಲೂಕಿನಲ್ಲಿ ಸಹಾಯಕ ಚುನಾವಣಾಧಿಕಾರಿಗಳಾಗಿರುವ ತಹಸೀಲ್ದಾರ್ ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ.
ಆ.29ರಂದು ರಾಜ್ಯಾದ್ಯಂತ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ತಿ.ನರಸೀಪುರ ಪುರಸಭೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದರು.

ಈ ಹಿನ್ನೆಲೆಯಲ್ಲಿ ಇದೇ 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಆ.20 ಕಡೆಯ ದಿನವಾಗಿದೆ. ಮೈಸೂರು ಮಹಾನಗರ ಪಾಲಿಕೆಗೆ ಆಗಸ್ಟ್ 13 ರಿಂದ 20ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 23ರಂದು ನಾಮಪತ್ರ ಹಿಂಪಡೆಯಬಹುದಾಗಿದೆ.
ಹಾಗೆಯೇ ಪುರಸಭೆ ಹಾಗೂ ಮಹಾನಗರ ಪಾಲಿಕೆಯ ಮತ ಎಣಿಕೆ ಇದೇ ಸೆ.3ರಂದು ನಡೆಯಲಿದೆ ಎಂದರು.
ತಾಲೂಕಿನ ತಿ. ನರಸೀಪುರ ಪುರಸಭೆ 23, ಪಿರಿಯಾಪಟ್ಟಣ ಪುರಸಭೆ 23, ಎಚ್.ಡಿ. ಕೋಟೆ ಪುರಸಭೆಯಲ್ಲಿ 23 ಸದಸ್ಯರಿದ್ದು, ಒಟ್ಟು 69 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 3 ಪುರಸಭೆಯ 69(ತಲಾ 23ವಾರ್ಡ್) ವಾರ್ಡ್ ಗಳಿಂದ 29943 ಪುರುಷರು, 30711 ಮಹಿಳೆಯರು ಸೇರಿದಂತೆ ಒಟ್ಟು 60,654 ಮತ ಚಲಾಯಿಸಲಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತಿದೆ.
ಅಭ್ಯರ್ಥಿಗಳು ಚುನಾವಣಾ ವೆಚ್ಚದ ವಿವರವನ್ನು ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಫಲಿತಾಂಶ ಘೋಷಣೆಯಾಗುವ ದಿನಾಂಕದವರೆಗೆ ನಗರಸಭೆ 2 ಲಕ್ಷ ರೂ., ಪುರಸಭೆ 1.5 ಲಕ್ಷ ರೂ., ಪಟ್ಟಣ ಪಂಚಾಯಿತಿ 1 ಲಕ್ಷ ರೂ. ಗರಿಷ್ಟ ಮಿತಿಗೆ ಒಳಪಟ್ಟು ಚುನಾವಣಾ ವೆಚ್ಚಗಳನ್ನು ಮಾಡಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications