ಕನ್ನಡ ಸಾಹಿತ್ಯ ಸಮ್ಮೇಳನ: ಮೈಸೂರಿನ ಶಾಲೆಗಳಿಗೆ ನ.24, 25 ರಜಾ

ಮೈಸೂರು, ನವೆಂಬರ್ 22: ಇದೇ ತಿಂಗಳ 24, 25, ಮತ್ತು 26ನೇ ತಾರೀಕು ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎರಡು ದಿನ (ನವೆಂಬರ್ 24, 25) ಮೈಸೂರು ಜಿಲ್ಲೆ ವ್ಯಾಪ್ತಿಯ ಶಾಲೆಗಳಿಗೆ ರಜಾ ಘೋಷಿಸಲಾಗಿದೆ.

ಈ ಎರಡು ದಿನ ರಜಾ ನೀಡುವುದರಿಂದ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನಕ್ಕೆ ಹಾಗೂ ಪಠ್ಯಕ್ರಮ ಪೂರ್ಣಗೊಳಿಸಲು ಯಾವುದೇ ತೊಂದರೆ ಆಗದಂತೆ ಮುಂದಿನ ಶನಿವಾರಗಳಂದು ಪೂರ್ತಿ ದಿನ ಶಾಲೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

Kannada

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಬಾರಿ ಮೈಸೂರಿನಲ್ಲಿ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ಆಯ್ಕೆ ಆಗಿದ್ದಾರೆ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿದ್ದು, ಅವರ ಆಡಳಿತಾವಧಿಯ ಕೊನೆ ಘಟ್ಟ ಇದಾಗಿದೆ. ಆದ್ದರಿಂದ ಸ್ಮರಣೀಯ ಎನಿಸುವಂತೆ ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ತಯಾರಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+