ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಅಣು ವಿಜ್ಞಾನಿ ನಿಗೂಢವಾಗಿ ನಾಪತ್ತೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 10: ಇಲ್ಲಿನ ಭಾಭಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಅಪರೂಪದ ವಸ್ತುಗಳ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ವಿಜ್ಞಾನಿಯೊಬ್ಬರು ಕಳೆದ ನಾಲ್ಕು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಸಹಾಯಕ ವೈಜ್ಞಾನಿಕಾಧಿಕಾರಿ ಆಗಿದ್ದ ಅಭಿಷೇಕ್ ರೆಡ್ಡಿ ಗುಲ್ಲಾ ಅವರೇ ನಾಪತ್ತೆ ಆದವರು. ಮೈಸೂರಿನ ಇಲವಾಲದಲ್ಲಿರುವ ಕಾವೇರಿ ಲೇಔಟ್​ನಲ್ಲಿ ಅವರು ವಾಸವಾಗಿದ್ದರು.

Mysuru: A Nuclear Scientist Working In Bhabha Atomic Research Institute Missing

ಭಾಭಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಕಳೆದ ಒಂದು ವರ್ಷದಿಂದ ಇವರು ಕೆಲಸ ಮಾಡುತಿದ್ದರು ಎನ್ನಲಾಗಿದೆ. ಅಲ್ಲದೆ ಅವರು ಖಿನ್ನತೆ ಮತ್ತು ಮೈಗ್ರೇನ್‌ನಿಂದ ಬಳಲುತ್ತಿದ್ದರು ಎಂದೂ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ. ಅಭಿಷೇಕ್​ ರೆಡ್ಡಿ ಯಾರಿಗೂ ತಿಳಿಸದೆ ಹೊರಟು ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ, ಸಿಬಿಐನಲ್ಲಿ ಎಫ್‌ಐಆರ್‌ಬೆಂಗಳೂರು ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ, ಸಿಬಿಐನಲ್ಲಿ ಎಫ್‌ಐಆರ್‌

ಎರಡು ತಿಂಗಳ ಹಿಂದೆ ಹೆತ್ತವರ ಮರಣದ ನಂತರ ರೆಡ್ಡಿ ಒಬ್ಬಂಟಿಯಾಗಿದ್ದರು ಎಂದು ಇಲವಾಲ ಪೊಲೀಸ್​ ಠಾಣೆ ಇನ್ಸ್ ‌ಪೆಕ್ಟರ್ ಎನ್‌. ಎಚ್. ಯೋಗಾನಂದ ತಿಳಿಸಿದ್ದಾರೆ. ಅಕ್ಟೋಬರ್ 6ರ ಮಧ್ಯಾಹ್ನ ರೆಡ್ಡಿ, ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಯಿಂದ ಹೊರಹೋಗುವುದನ್ನು ಅವರ ನೆರೆಹೊರೆಯವರು ಕೊನೆಯದಾಗಿ ನೋಡಿದ್ದರು. ಈ ಬಳಿಕ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

English summary
A 24 year old scientist working in a Bhabha Atomic Research Institute in Mysuru has missing since four days
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X