ಆರ್ ಟಿಇ: ಕೇರಳ ಮಾದರಿ ಕರ್ನಾಟಕದಲ್ಲೂ ಅನುಷ್ಠಾನಗೊಳ್ಳುವುದೇ?
ಮೈಸೂರು, ಅಕ್ಟೋಬರ್.29:ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಗೂ ಅವುಗಳನ್ನು ಖಾಸಗಿ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಕ್ಕಳಿಗೆ ಮಾತೃಭಾಷಾ ಶಿಕ್ಷಣವನ್ನು ಪರಿಣಾಮಕಾರಿಯಾಗಿ ನೀಡಿ ಖಾಸಗಿ ಶಾಲೆಗಳ ಹಾವಳಿ ತಡೆಯಲು ಕಾರ್ಯಕ್ರಮ ರೂಪಿಸಿದೆ.
ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‍ಟಿಇ) ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿಸದೆ, ಸರ್ಕಾರಿ ಶಾಲೆಗಳಲ್ಲೇ ದಾಖಲಿಸಿಕೊಂಡು ಈ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿ, ಗುಣಮಟ್ಟ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.
ಕೇರಳದಲ್ಲಿ ಈಗಾಗಲೇ ಈ ವ್ಯವಸ್ಥೆ ಜಾರಿಯಲ್ಲಿದ್ದು, ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಲು ಯೋಜನೆಯೊಂದು ಸಿದ್ಧವಾಗಿದ್ದು, ಇದಕ್ಕೆ ಸಂಪುಟ ಒಪ್ಪಿಗೆ ನೀಡಿದರೆ ಮುಂದಿನ ವರ್ಷದಿಂದಲೇ ಜಾರಿಯಾಗಲಿದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.
ವರ್ಷದಿಂದ ವರ್ಷಕ್ಕೆ ಆರ್‍ಟಿಇ ಅಡಿ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಜತೆಗೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ.
ಆರ್‍ಟಿಇ ಅಡಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಸರ್ಕಾರದಿಂದಲೇ ಶಾಲಾಡಳಿತ ಮಂಡಳಿಗೆ ಮರುಪಾವತಿ ಮಾಡಲಾಗುತ್ತಿದ್ದು, ಇದು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವ ಜತೆಗೆ ಸರ್ಕಾರಿ ಶಾಲೆಗಳು ಮಕ್ಕಳಿಲ್ಲದೇ ದುರ್ಬಲವಾಗುತ್ತಿವೆ. ಮುಂದೆ ಓದಿ..

ಸರ್ಕಾರಕ್ಕೆ ಪ್ರಸ್ತಾವನೆ
ಆರ್‍ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಸೇರುವ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಸರ್ಕಾರವೇ ಶುಲ್ಕ ಭರಿಸಿ ಖಾಸಗಿ ಶಾಲೆಗೆ ಸೇರಿಸುವ ಬದಲು ಆ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ದಾಖಲಿಸಿಕೊಳ್ಳುವ "ಕೇರಳ ಮಾದರಿ' ಕರ್ನಾಟಕದಲ್ಲೂ ಅನುಷ್ಠಾನಗೊಳಿಸುವ ಬಗ್ಗೆ ರೂಪು ರೇಷೆ ಸಿದ್ಧವಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆರ್‍ಟಿಇ ನಿಯಮಗಳಿಗೆ ಸಂಬಂಧಿಸಿದಂತೆ ಕೇರಳ ಮಾದರಿಯ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಈ ಸಂಬಂಧ ಯಾವುದೇ ನಿರ್ಧಾರವಾಗಿಲ್ಲ.

1.10 ಲಕ್ಷ ವಿದ್ಯಾರ್ಥಿಗಳಿಗೆ ಸೀಟು
2012-13ನೇ ಸಾಲಿನಿಂದ 2017-18ನೇ ಸಾಲಿನವರಗೂ ಆರ್‍ಟಿಇ ಅಡಿ ದಾಖಲಾಗಿರುವ ಮಕ್ಕಳಿಗೆ ಇದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. 2018-19ನೇ ಸಾಲಿನ ಆರ್‍ಟಿಇ ವಿದ್ಯಾರ್ಥಿಗಳ ದಾಖಲಾತಿ ಈಗಾಗಲೇ ಪೂರ್ಣಗೊಂಡಿದೆ.
ಇಲಾಖೆಯಿಂದ ಜಿಲ್ಲಾ, ಕ್ಷೇತ್ರ ಮತ್ತು ಶಾಲಾವಾರು ಆರ್‍ಟಿಇ ದಾಖಲಾತಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. 2.50 ಲಕ್ಷಕ್ಕೂ ಹೆಚ್ಚು ಅರ್ಜಿ ಬಂದಿದ್ದು, ವಿವಿಧ ಸುತ್ತಿನ ಆನ್ ಲೈನ್ ಸೀಟು ಹಂಚಿಕೆಯಲ್ಲಿ ಸುಮಾರು 1.10 ಲಕ್ಷ ವಿದ್ಯಾರ್ಥಿಗಳು ಸೀಟು ಪಡೆದಿದ್ದಾರೆ.

ಸಚಿವ ಸಂಪುಟದಲ್ಲಿ ಒಪ್ಪಿಗೆ ಬೇಕು
2012-13ನೇ ಸಾಲಿನಿಂದ ರಾಜ್ಯದಲ್ಲಿ ಆರ್‍ಟಿಇ ಜಾರಿಗೆ ಬಂದಿದ್ದು, ಈ ಯೋಜನೆಯಡಿ ಸರಿಸುಮಾರು 6.30 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದಕ್ಕಾಗಿ ಸರ್ಕಾರ 800 ಕೋಟಿಗಳಿಗೂ ಅಧಿಕ ಹಣವನ್ನು ಈವರೆಗೆ ವಿನಿಯೋಗ ಮಾಡಿದೆ.
ಆರ್‍ಟಿಇ ಕಾಯ್ದೆಯ ಕೆಲವು ನಿಯಮಗಳಲ್ಲಿ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಸಚಿವ ಸಂಪುಟದಲ್ಲಿ ಈ ವಿಷಯಕ್ಕೆ ಒಪ್ಪಿಗೆ ಪಡೆದ ಆನಂತರ ಅನುಷ್ಠಾನ ಸಾಧ್ಯ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಮೊದಲ ಆದ್ಯತೆ
ಕೇರಳದಲ್ಲಿ ಸರ್ಕಾರಿ ಶಾಲಾ ವ್ಯವಸ್ಥೆ ತುಂಬಾ ಚೆನ್ನಾಗಿದೆ. ಹೀಗಾಗಿ ಆ ರಾಜ್ಯದಲ್ಲಿ ಆರ್‍ಟಿಇ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಮೊದಲ ಆದ್ಯತೆಯಂತೆ ಸೀಟು ನೀಡಲಾಗುತ್ತದೆ.
ಸರ್ಕಾರಿ ಅಥವಾ ಅನುದಾನಿತ ಶಾಲೆ ಇಲ್ಲದ ಕಡೆಗಳಲ್ಲಿ ಮಾತ್ರ ಖಾಸಗಿ ಶಾಲೆಗೆ ಆರ್‍ಟಿಇ ಅಡಿ ಮಕ್ಕಳನ್ನು ದಾಖಲಿಸಿ ಅಂಥ ಮಕ್ಕಳ ಶುಲ್ಕವನ್ನು ಸರ್ಕಾರದಿಂದ ಶಾಲೆಗಳಿಗೆ ಪಾವತಿಸಲಾಗುತ್ತದೆ.
ಅದೇ ಮಾದರಿಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲು ಸಂಬಂಧಿಸಿದ ಪ್ರಸ್ತಾವನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರ್ಕಾರಕ್ಕೆ ಸಲ್ಲಿಸಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications