ಮೊದಲ ಆ‍ಷಾಢ ಶುಕ್ರವಾರ:ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

Recommended Video

      ಮೊದಲ ಆ‍ಷಾಢ ಶುಕ್ರವಾರ:ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ | oneindia Kannada

      ಮೈಸೂರು, ಜುಲೈ.20: ಮೊದಲ ಆ‍ಷಾಢ ಶುಕ್ರವಾರ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮುಂಜಾನೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಯಿತು.

      ವಿಶೇಷ ಪೂಜೆ ಸಲ್ಲಿಕೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ನಾಡ ಅಧಿದೇವತೆಯನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ. ದೇವಾಲಯದ ಸುತ್ತಲೂ ಬಣ್ಣ ಬಣ್ಣದ ಹೂವಿನ ಅಲಂಕಾರ ಮಾಡಲಾಗಿದೆ.

      ಬೆಟ್ಟದಲ್ಲಿ ಸುಗಮ ಸಂಚಾರಕ್ಕೆ ಹಾಗೂ ಗಣ್ಯ ವ್ಯಕ್ತಿಗಳಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ದೇವಿಯ ದರ್ಶನ ಪಡೆದು ಸಾವಿರಾರು ಭಕ್ತರು ಪುನೀತರಾದರು.

      On the first Friday of the month of Ashada to offer puja to Goddess Chamundeshwari

      ಬೆಳಗ್ಗೆ 5:30ರಿಂದ ದೇವಿ ದರ್ಶನಕ್ಕೆ ಅನುವು ಮಾಡಿಕೊಡಲಾಗಿದ್ದು, ದೇವಸ್ಥಾನಕ್ಕೆ ಬಂದಂತಹ ಭಕ್ತಾಧಿಗಳಿಗೆ ಸೇವಾ ಸಂಸ್ಥೆಗಳಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.

      On the first Friday of the month of Ashada to offer puja to Goddess Chamundeshwari

      ವಿಶೇಷ ಪೂಜೆ ಸಲ್ಲಿಸಿದ ಜಿಟಿಡಿ ಕುಟುಂಬ
      ಮೊದಲ ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ತ್ರಿಪುರಸುಂದರಿ ದೇವಾಲಯದಲ್ಲಿ ಉತ್ತನಹಳ್ಳಿ ಶ್ರೀ ಜ್ವಾಲಾಮುಖಿ ತ್ರಿಪುರಸುಂದರಿ ತಾಯಿಗೆ ಸಚಿವ ಜಿಟಿಡಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿತು.

      ಪೂಜೆ ಸಲ್ಲಿಸಿದ ನಂತರ ಸಚಿವರು ಭಕ್ತಾಧಿಗಳಿಗೆ ಪ್ರಸಾದ ಹಂಚಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+