• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಬಿನಿ ಜಲಾಶಯ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ

By ಮೈಸೂರು ಪ್ರತಿನಿಧಿ
|

ಮೈಸೂರು, ಆಗಸ್ಟ್‌ 14: ಇತ್ತೀಚೆಗೆ ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಬಿನಿ ಜಲಾಶಯ ಭರ್ತಿಯಾಗಲು ಒಂದು ಅಡಿ ಮಾತ್ರ ಬಾಕಿ ಇದೆ.

ಕಬಿನಿ ಜಲಾಶಯಕ್ಕೆ 16,112 ಕ್ಯೂಸೆಕ್ ನೀರು ಬರುತ್ತಿದ್ದು, ಜಲಾಶಯದಿಂದ ಒಟ್ಟು 15,625 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ನಾಲೆಗಳಿಗೆ 625 ಕ್ಯೂಸೆಕ್, ನದಿಗೆ 15,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ ಆಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 2283.02 ಅಡಿ ಇದೆ.

ಮಂಡ್ಯ: ಕೆಆರ್ ಎಸ್ ಜಲಾಶಯ ಭರ್ತಿಗೆ ಒಂದೇ ಅಡಿ ಮಾತ್ರ ಬಾಕಿ

ಒಟ್ಟು 19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಇಂದು 18.87 ಟಿಎಂಸಿ ನೀರು ಸಂಗ್ರಹವಾಗಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ನೀರು ಹರಿದು ಬಂದಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.

English summary
As kerala's wayanad hit by heavy rain, the inflow level increased in Kabini reservoir of mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X