ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಮನಿ ಡಬ್ಲಿಂಗ್ ನಡೆಸುತ್ತಿದ್ದವರ ಮೇಲೆ ಫೈರಿಂಗ್: ಓರ್ವ ಸಾವು

|
Google Oneindia Kannada News

ಮೈಸೂರು, ಮೇ 16: ಮೈಸೂರಿನಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದವರ ಮೇಲೆ ಪೊಲೀಸರು ಶೂಟೌಟ್ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಗುರುವಾರ ನಡೆದಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮೈಸೂರಿನ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಘಟನೆ ನಡೆದಿದೆ . ವಿಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಣ ದುಪ್ಪಟ್ಟು ಮಾಡುವ ದಂಧೆಯೊಂದು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯನ್ವಯ ಅಲ್ಲಿನ ಪೊಲೀಸ್ ಕುಮಾರ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು.

ಯಹೂದಿಗಳ ಶ್ರದ್ಧಾ ಕೇಂದ್ರದಲ್ಲಿ ಗುಂಡು ಹಾರಿಸಿ ಮಹಿಳೆ ಸಾವುಯಹೂದಿಗಳ ಶ್ರದ್ಧಾ ಕೇಂದ್ರದಲ್ಲಿ ಗುಂಡು ಹಾರಿಸಿ ಮಹಿಳೆ ಸಾವು

One person dead in Mysuru police shoot out.

ಸ್ಥಳಕ್ಕೆ ಕುಮಾರ್ ಹಾಗೂ ತಂಡ ತೆರಳುತ್ತಿದ್ದಂತೆ ಮೂರು ಮಂದಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಇದೇ ವೇಳೆ ಓರ್ವ ಸಿಕ್ಕಿ ಹಾಕಿಕೊಂಡ ಪರಿಣಾಮ ಖಾಕಿಪಡೆ ಫೈರಿಂಗ್ ನಡೆಸಿದರು. ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ತಕ್ಷಣ ಅವನನ್ನು ಕೆಆರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.

ಮನಿ ಡಬ್ಲಿಂಗ್ ನಡೆಸುತ್ತಿದ್ದವರ ಬಳಿಯೂ ಗನ್ ಇದ್ದು, ಅವರು ತಮ್ಮ ಕೈಯ್ಯಲ್ಲಿ ಗನ್ ಹಿಡಿದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಪೊಲೀಸರ ಮೇಲೆ ಶೂಟ್ ಮಾಡಲು ಮುಂದಾಗಿದ್ದಾರೆ. ಇದನ್ನು ಮನಗಂಡ ಖಾಕಿ ಪಡೆ ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಶೂಟೌಟ್ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರಿಗೂ ಗಾಯವಾಗಿರುವುದು ತಿಳಿದುಬಂದಿದೆ.

English summary
One person dead in Mysuru police shoot out. He is involved at money doubling case. The incident took place in an apartment near the Hebbal ring road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X