ಕೆಎಸ್ಓಯು: ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ Online ಮೂಲಕ ತರಗತಿ
ಮೈಸೂರು, ಮೇ 4: ಕೊರೊನಾ ವೈರಸ್ ಪರಿಣಾಮ ಲಾಕ್‌ಡೌನ್ ಇರುವುದರಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು(ಕೆಎಸ್ಓಯು) 2019-20ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ) ಪ್ರವೇಶಾತಿ ಪಡೆದಿದ್ದ ಪ್ರಥಮ ಮತ್ತು ದ್ವಿತೀಯ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ Online ಮೂಲಕ ಸಂಪರ್ಕ ತರಗತಿಗಳು ಪ್ರಾರಂಭವಾಗಿವೆ ಎಂದು ಕೆಎಸ್ಓಯು ತಿಳಿಸಿದೆ.
ವೇಳಾಪಟ್ಟಿಯನ್ನು ಈಗಾಗಲೇ www.ksoumyuru.ac.in ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ವಿದ್ಯಾರ್ಥಿಗಳು ksoustudent App ಅನ್ನು ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ Online ಸಂಪರ್ಕ ಕಾರ್ಯಕ್ರಮಕ್ಕೆ ಲೈವ್ ಆಗಿ ಸೇರಿಕೊಳ್ಳಬಹುದಾಗಿದೆ. ksoustudent App www.ksoumyuru.ac.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಆನ್‍ಲೈನ್ ಸಂಪರ್ಕ ತರಗತಿಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ದೂರವಾಣಿ ಸಂಖ್ಯೆ 9108808219 ಸಂಪರ್ಕಿಸಬಹುದಾಗಿದೆ.












Click it and Unblock the Notifications