ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಜಾರಿಗೆ ಚಿಂತನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 18: ಮೈಸೂರು ನಗರವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದು, ನಗರದ ವಿವಿಧ ಪ್ರವಾಸಿ ತಾಣಗಳಿಗೆ ದೇಶ, ವಿದೇಶದಿಂದ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಇಲಾಖೆಯು ಬುಕ್ ಮೈ ಶೋ ಆ್ಯಪ್ ಸಹಯೋಗದಲ್ಲಿ ಸಿಟಿ ಪಾಸ್ ಹಾಗೂ ಸಿಂಗಲ್ ಟಿಕೆಟಿಂಗ್ ಸಿಸ್ಟಮ್ ಜಾರಿ ಮಾಡಲು ಉದ್ದೇಶಿಸಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಗಳವಾರ ಚರ್ಚೆ ನಡೆಸಲಾಯಿತು.

ಮೈಸೂರಿನ ದೇವರಾಜ ಮಾರುಕಟ್ಟೆ ಕೆಡವಲು ಒಪ್ಪುವುದಿಲ್ಲವೆಂದ ಯದುವೀರ್ಮೈಸೂರಿನ ದೇವರಾಜ ಮಾರುಕಟ್ಟೆ ಕೆಡವಲು ಒಪ್ಪುವುದಿಲ್ಲವೆಂದ ಯದುವೀರ್

ನಗರದ ಹೋಟೆಲ್ ಮಯೂರದಲ್ಲಿ ನಡೆದ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಮಾತನಾಡಿ, ಆನ್ ಲೈನ್ ಟಿಕೆಟ್ ಜಾರಿ ಮಾಡುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ನಗರದ ಅನೇಕ ಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಸೇವೆಯನ್ನು ಜಾರಿ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.

Online Ticket Booking For Tourist Spots In Mysuru

ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಸೆಂಟ್ ಫಿಲೋಮಿನಾ ಚರ್ಚ್, ಅರಮನೆ, ಸ್ಯಾಂಡ್ ಮ್ಯೂಸಿಯಂ, ವ್ಯಾಕ್ಸ್ ಮ್ಯೂಸಿಯಂ, ರೈಲ್ವೆ ಮ್ಯೂಸಿಯಂ, ಲಲಿತ ಮಹಲ್ ಪ್ಯಾಲೆಸ್, ಮೃಗಾಲಯ, ಕಾರಂಜಿ ಕೆರೆ ಮುಂತಾದ ಪ್ರವಾಸಿ ತಾಣಗಳಲ್ಲಿ ಆನ್ ಲೈನ್ ಮಾದರಿಯಲ್ಲಿ ಟಿಕೆಟ್ ವ್ಯವಸ್ಥೆ ಕಲ್ಪಿಸಿ, ಸ್ಥಳಗಳನ್ನು ವೀಕ್ಷಿಸಲು ಸುಲಭವಾಗುವಂತೆ ಮಾಡಬೇಕು ಎಂದು ಮಾಹಿತಿ ನೀಡಿದರು.

ಮುದ್ದಿನ ಕೋತಿಯ ದೇವಸ್ಥಾನ ಉದ್ಘಾಟಿಸಿದ ಸಾರಾ ಮಹೇಶ್ಮುದ್ದಿನ ಕೋತಿಯ ದೇವಸ್ಥಾನ ಉದ್ಘಾಟಿಸಿದ ಸಾರಾ ಮಹೇಶ್

ನಾಡಹಬ್ಬ ಮೈಸೂರು ದಸರಾದಲ್ಲಿ ಪ್ರವಾಸಿಗರು ನಗರದಲ್ಲಿರುವ ಎಲ್ಲಾ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಅಲ್ಲದೇ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಗಳನ್ನು ನೋಡಲು ಕೂಡಾ ವಿದೇಶಿಗರಿಗೆ ಟಿಕೆಟ್ ದೊರೆಯುವುದಿಲ್ಲ. ಈ ನಿಟ್ಟಿನಲ್ಲಿ ವಿದೇಶಿ ಪ್ರವಾಸಿಗರಿಗಾಗಿಯೇ ಸ್ವಲ್ಪ ಟಿಕೆಟ್ ಮೀಸಲಿಡಬೇಕು ಎಂದು ಹೇಳಿದರು.

Online Ticket Booking For Tourist Spots In Mysuru

ದಸರಾ ಹಬ್ಬಕ್ಕೆ ಈಗಿನಿಂದಲೇ ಸಭೆ ಸೇರಿ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಂಡು, ದಸರಾ ಸಮೀಪದಲ್ಲಿ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರವಾಸೋದ್ಯಮ ಸಚಿವರು ಸೂಚಿಸಿದ್ದಾರೆ. ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಪೂರಕವಾಗುವಂತೆ ಎಲ್ಲಾ ಸೌಲಭ್ಯವನ್ನು ಒದಗಿಸಬೇಕು ಎಂದರು.

ಮುಂಬರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಯೋಗ ಪಟುಗಳೊಂದಿಗೆ ಆಚರಿಸಲು ಪೂರ್ವ ಸಿದ್ಧತೆಯನ್ನು ಮಾಡಲಾಗಿದ್ದು, ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

English summary
Online Ticket Booking Start Coming days in Mysuru tourist Places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X