ಮೈಸೂರು ದಸರಾ : 4 ಜಿಲ್ಲೆಗಳ ಸ್ತಬ್ಧಚಿತ್ರಗಳಿಗೆ ಮಾತ್ರ ಅವಕಾಶ

ಮೈಸೂರು, ಅಕ್ಟೋಬರ್ 01 : ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಜಂಬೂ ಸವಾರಿ ಬಿಟ್ಟರೆ ಜನರನ್ನು ಆಕರ್ಷಿಸುವುದು ಸ್ತಬ್ಧಚಿತ್ರಗಳು ಮತ್ತು ವಿವಿಧ ಕಲಾತಂಡಗಳು. ಈ ಬಾರಿ ಅದ್ದೂರಿ ದಸರಾಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರ ಸ್ತಬ್ಧಚಿತ್ರಗಳು ಮತ್ತು ಕಲಾತಂಡಗಳ ಸಂಖ್ಯೆಯನ್ನು ಕಡಿತಗೊಳಿಸಿದೆ.

ಈ ಬಾರಿಯ ದಸರಾದಲ್ಲಿ 20 ಸ್ತಬ್ಧಚಿತ್ರಗಳು ಮತ್ತು 30 ಕಲಾತಂಡಗಳಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಉಮಾಶ್ರೀ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. [ದಸರಾ ಉದ್ಘಾಟನೆ ಮಾಡೋಲ್ಲ ಅಂದ್ರು ಶಾಮಣ್ಣ]

dasara

ರಾಜ್ಯದಲ್ಲಿನ ಬರಗಾಲದ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಆದ್ದರಿಂದ ಸ್ತಬ್ಧಚಿತ್ರಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರಗಳು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿವೆ. [ಸರಳವಾಗಿ ದಸರಾ ಆಚರಣೆ : ಈ ಬಾರಿ ಏನಿರುತ್ತೆ, ಏನಿರಲ್ಲ?]

ಪ್ರತಿವರ್ಷ ದಸರಾದಲ್ಲಿ ಎಲ್ಲಾ ಜಿಲ್ಲೆಗಳ ಮತ್ತು ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಸೇರಿದಂತೆ 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು ಮತ್ತು 50ಕ್ಕೂ ಹೆಚ್ಚು ಕಲಾತಂಡಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿದ್ದವು. ಆದರೆ, ಈ ಬಾರಿ ಅವುಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ.[2015ರ ದಸರಾ ವೆಬ್ ಸೈಟ್]

ನವರಾತ್ರಿಯ ಸಂದರ್ಭದಲ್ಲಿ ಅರಮನೆಯ ವೇದಿಕೆಯಲ್ಲಿ ಮಾತ್ರ ರಾತ್ರಿ 7 ಗಂಟೆಯಿಂದ 9 ಗಂಟೆಯ ತನಕ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡಿರುವ ಕರ್ನಾಟಕ ರಾಜ್ಯದ ಕಲಾವಿದರು ಈ ಬಾರಿ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಅಂದಹಾಗೆ ಅಕ್ಟೋಬರ್‌ 14ರ ಬುಧವಾರ ಹತ್ತು ದಿನಗಳ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಅಕ್ಟೋಬರ್ 23ರ ಶುಕ್ರವಾರ ಜಂಬೂ ಸವಾರಿ ನಡೆಯಲಿದೆ. ಈ ಬಾರಿ ದಸರಾಕ್ಕೆ ಸುಮಾರು 4 ಕೋಟಿ ಖರ್ಚಾಗಬಹುದು ಎಂದು ಅಂದಾಜಿಸಲಾಗಿದ್ದು, ಜಂಬೂ ಸವಾರಿಗೆ 1 ಕೋಟಿ ವೆಚ್ಚವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+