ಮೈಸೂರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ: ಪರಿಶೀಲನೆ
ಮೈಸೂರು, ಏಪ್ರಿಲ್ 03: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ಭೇಟಿ ನೀಡಿ, ಕೊರೊನಾ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಸಿದ್ದರಾಮಯ್ಯ ಅವರು, ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಕೊರೊನಾ ವೈರಸ್ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲಿಯಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಹೆಚ್ಚುವರಿ ಡಿಸಿ ಪೂರ್ಣಿಮಾ, ಹೆಚ್ಚುವರಿ ಎಸ್ಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.











Click it and Unblock the Notifications