ಉಪಚುನಾವಣೆ: ಕಾಂಗ್ರೆಸ್ ಗೆ ಸಾಹಿತಿ, ಕಲಾವಿದರ ಬೆಂಬಲ

ಜಾತ್ಯಾತೀತ ಮನೋಧರ್ಮದವನ್ನು ಬಿತ್ತುವ ಕಾಂಗ್ರೆಸ್‍ ಪಕ್ಷದ ಅಭ್ಯರ್ಥಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಲ ಸಾಹಿತಿಗಳು ಹೇಳಿದರು.

ಮೈಸೂರು, ಏಪ್ರಿಲ್ 5 : ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ನಮ್ಮ ಸಂಪೂರ್ಣ ಬೆಂಬಲವೆಂದು ಸಾಹಿತಿ ಮತ್ತು ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಮರುಳಸಿದ್ದಪ್ಪ ತಿಳಿಸಿದರು.

ಜಾತ್ಯಾತೀತ ಸಿದ್ಧಾಂತದ ನಿಲುವು ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸುಭದ್ರ ಆಡಳಿತದಿಂದಾಗಿ ರಾಜ್ಯ ಸರ್ವಾಂಗೀಣ ಪ್ರಗತಿಪಥದತ್ತ ಸಾಗುತ್ತಿದ್ದು, ಅದಕ್ಕೆಂದೇ ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದೇವೆಂದು ಅವರು ಹೇಳಿದರು.[ಮತ ಕೇಳುವ ನೈತಿಕತೆ ಯಡಿಯೂರಪ್ಪನವರಿಗೆಲ್ಲಿದೆ ?: ಸಿದ್ದರಾಮಯ್ಯ]

Our support is for Congress in by election: actors and writers

ಮೈಸೂರು ಪತ್ರಕರ್ತರ ಭವನದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಚಿಂತಕರು, ಸಾಹಿತಿ ಕಲಾವಿದರು ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜಾತ್ಯಾತೀತ ಮನೋಧರ್ಮದವನ್ನು ಬಿತ್ತುವ ಕಾಂಗ್ರೆಸ್‍ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಸಮಗ್ರ ಪ್ರಗತಿಪಥದತ್ತ ಕೊಂಡೊಯ್ದಿದೆ. ಅಲ್ಲದೇ ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಸಾಮಾಜಿಕ ಕಳಕಳಿಯ ಯೋಜನೆಗಳನ್ನು ಹಮ್ಮಿಕೊಂಡು ಬಡವರ, ದೀನದಲಿತರ ಶ್ರೇಯೋಭಿವೃದ್ಧಿಗೈದಿದೆ ಎಂದರು.[ಅನುಕಂಪದ ಅಲೆಯಲ್ಲ, ಪತಿಯ ಜನಸೇವೆ ನನ್ನ ಗೆಲ್ಲಿಸುತ್ತೆ: ಗೀತಾ ಮಹಾದೇವಪ್ರಸಾದ್]

ಕೋಮುವಾದಿ ಪಕ್ಷ ತನ್ನ ಐದೇ ಐದು ವರ್ಷದ ಆಳ್ವಿಕೆಯಲ್ಲಿ ಮೂರು ಸರ್ಕಾರವನ್ನು ರಚಿಸಿ ಮತದಾರರಿಗೆ ಇರಿಸುಮುರಿಸನ್ನುಂಟು ಮಾಡಿತ್ತು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್‍ ಪಕ್ಷವನ್ನು ಬೆಂಬಲಿಸುವುದಾಗಿ ತಿಳಿಸಿದರು.[ಮೋದಿಗೆ ನನ್ನ ವಯಸ್ಸು ಗೊತ್ತಿದೆ, ನಾನೇ ಮುಂದಿನ ಸಿಎಂ - ಯಡಿಯೂರಪ್ಪ]

ವಿಧಾನ ಪರಿಷತ್ ಸದಸ್ಯೆ ಹಾಗೂ ಚಲನಚಿತ್ರ ನಟಿ ಜಯಮಾಲ ಮಾತನಾಡಿ ನಾಲ್ಕು ವರ್ಷದ ಆಳ್ವಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತ್ಯುತ್ತಮ ಬಜೆಟ್ ನೀಡಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿದ್ದಾರೆ. ಜನಪರ ಯೋಜನೆಗಳನ್ನು ಹಮ್ಮಿಕೊಂಡು ರಾಜ್ಯವನ್ನು ಪ್ರಗತಿಪಥದತ್ತ ಮುನ್ನಡೆಸುತ್ತಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿರುವುದು ಮೈಲಿಗಲ್ಲಾಗಿದೆ ಎಂದರು.

ಡಾ.ಗೀತಾ ಮಹದೇವ ಪ್ರಸಾದ್ ಸುಸಂಸ್ಕೃತ ವಿದ್ಯಾವಂತೆಯಾಗಿದ್ದು, ದಿ.ಮಹದೇವ ಪ್ರಸಾದ್ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕಂಡ ಕನಸನ್ನು ಈಡೇರಿಸುವುದು ಖಂಡಿತ ಎಂದು ನಟಿ ಜಯಮಾಲ ವಿಶ್ವಾಸ ವ್ಯಕ್ತಪಡಿಸಿದರು.[ಸಿದ್ದರಾಮಯ್ಯ ಒಬ್ಬ ತಲಾಕ್ ರಾಜಕಾರಣಿ: ಈಶ್ವರಪ್ಪ ವ್ಯಂಗ್ಯ]

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ್ ಸಿಂಗ್ ಬಾಬು ಮಾತನಾಡಿ, ಸತತ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬರವಿದ್ದರೂ, ಕಾಂಗ್ರೆಸ್‍ ಸರ್ಕಾರ ಅದನ್ನು ಸಮರ್ಥವಾಗಿ ಎದುರಿಸಿದೆ. ಚಲನಚಿತ್ರರಂಗಕ್ಕೂ ಮುಖ್ಯಮಂತ್ರಿಗಳು ಹಲವಾರು ವಿಶಿಷ್ಟ ಕೊಡುಗೆಗಳನ್ನು ನೀಡಿ, ಚಿತ್ರೋದ್ಯಮವನ್ನು, ಕಲಾವಿದರನ್ನು ಹಾಗೂ ತಂತ್ರಜ್ಞರನ್ನು ಬೆಳೆಸುತ್ತಿದ್ದಾರೆ, ಇಂಥ ಸರ್ಕಾರಕ್ಕೆ ನಮ್ಮ ಬೆಂಬಲ ಎಂದಿಗೂ ಇರುತ್ತದೆ ಎಂದರು.

ಏಪ್ರಿಲ್ 13 ರಂದು ಉಪಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಗೆಲುವು ಯಾರಿಗೆ ಎಂಬುದು ನಿರ್ಧಾರವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+