• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಲ್ಲಿ ಆಕ್ಸಿಜನ್ ಸಿಲಿಂಡರ್ ಅಕ್ರಮ ಮಾರಾಟ!

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 05; ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಸಿಗದೆ ಕೆಲವು ಸೋಂಕಿತರು ಸಾವನ್ನಪ್ಪುತ್ತಿರುವ ಘಟನೆಗಳು ಕಣ್ಣಮುಂದೆಯೇ ನಡೆಯುತ್ತಿದ್ದರೂ ಕೆಲವರು ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಿ ಹಣ ಸಂಪಾದಿಸುವ ದಂಧೆಗಿಳಿದಿರುವುದು ದುರಂತವೇ ಸರಿ.

ಎರಡು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 12 ಆಕ್ಸಿಜನ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೀಗ ಮೈಸೂರಿನಲ್ಲಿಯೂ ಈ ದಂಧೆ ಜಿಗಿತುಕೊಂಡಿರುವುದು ಬೆಳಕಿಗೆ ಬಂದಿದ್ದು, ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ; ಕೋವಿಡ್ ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಲ್ಲಹುಬ್ಬಳ್ಳಿ; ಕೋವಿಡ್ ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಲ್ಲ

ನಗರದ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದ ನಿವಾಸಿ ಮಧುಕುಮಾರ್ (37) ಎಂಬಾತನನ್ನು ಬಂಧಿಸಿದ್ದಾರೆ. ಈತ ಆಕ್ಸಿಜನ್ ಸಿಲಿಂಡರ್ ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆಯಲ್ಲಿ ತೊಡಗಿಸಿಕೊಂಡಿದ್ದನು ಎಂದು ಆರೋಪಿಸಲಾಗಿದೆ. ಈಗಾಗಲೇ ಜಿಲ್ಲೆ ಸೇರಿದಂತೆ ಹಲವೆಡೆ ಆಕ್ಸಿಜನ್ ಸಿಲಿಂಡರ್‌ಗಳಿಗೆ ಬಹು ಬೇಡಿಕೆಯಿರುವುದನ್ನು ಅರಿತು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದನು.

ಆಕ್ಸಿಜನ್ ದುರಂತಕ್ಕೆ ಮೈಸೂರು ಡಿಸಿ ಕಾರಣ; ಚಾಮರಾಜನಗರ ಡಿಸಿ ಆರೋಪಆಕ್ಸಿಜನ್ ದುರಂತಕ್ಕೆ ಮೈಸೂರು ಡಿಸಿ ಕಾರಣ; ಚಾಮರಾಜನಗರ ಡಿಸಿ ಆರೋಪ

ಈ ಕುರಿತಂತೆ ಖಚಿತ ಮಾಹಿತಿ ಸಂಗ್ರಹಿಸಿದ ಮೈಸೂರು ನಗರ ಸಿಸಿಬಿ ಪೊಲೀಸರು ಹಾಗೂ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಜೆ. ಪಿ. ನಗರದ ಮೈಸೂರು-ನಂಜನಗೂಡು ಮುಖ್ಯ ರಸ್ತೆಯ ಹಾಗೂ ವರ್ತುಲ ರಸ್ತೆಯ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಮಾರಾಟ ಮಾಡಲು ಆಕ್ಸಿಜನ್ ತುಂಬಿದ್ದ ಜಂಬು (ಡಿ ಟೈಪ್) ಮೆಡಿಕಲ್ ಆಕ್ಸಿಜನ್ ಸಿಲಿಂಡರ್‌ ವಶಕ್ಕೆ ಪಡೆದುಕೊಂಡು, ಮಧುಕುಮಾರ್ ಬಂಧಿಸಿದ್ದಾರೆ.

ಆಕ್ಸಿಜನ್ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ; ಯು. ಟಿ. ಖಾದರ್ಆಕ್ಸಿಜನ್ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ; ಯು. ಟಿ. ಖಾದರ್

ಆಕ್ಸಿಜನ್ ಸಿಲಿಂಡರ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

English summary
Mysuru police arrested man who trying to sale oxygen cylinder illegally. Jumbo d type oxygen cylinder seized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X