Padma Shri Award: ಮೈಸೂರು ಜಿಲ್ಲೆಯ ಆದಿವಾಸಿ ಹೋರಾಟಗಾರನಿಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿ ಗೌರವ
ಮೈಸೂರು: ಆದಿವಾಸಿ ಜನರ ಹಕ್ಕು ಮತ್ತು ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತಿರುವ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲ್ಲೂಕಿನ ಮೊತ್ತ ಹಾಡಿಯ ಸೋಮಣ್ಣ ಅವರಿಗೆ ಈ ಬಾರಿಯ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ ದೊರೆತಿದೆ.
ಆಲತ್ತಾಳಹುಂಡಿಯ ಜೇನುಕುರುಬರಾದ ಸೋಮಣ್ಣ ಅವರು ಬುಡಕಟ್ಟು ಸಮುದಾಯದ ಸಾಕ್ಷಿಪ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿ ಜೀತ ಪದ್ದತಿಗೆ ಸಿಲುಕಿದ್ದ ಸೋಮಣ್ಣ ನಂತರ ಅಲ್ಲಿಂದ ಬಿಡುಗಡೆಯಾಗಿ ಬಳಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡರು.

ನಾಗರಹೊಳೆ, ಕಾಕನಕೋಟೆ ಅಭಯಾರಣ್ಯದಿಂದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸಿದಾಗ ಬುಡಕಟ್ಟು ಹಾಡಿಗಳಿಗೆ ಸೋಮಣ್ಣ ಅವರು ಕಾಲ್ನಡಿಗೆಯಲ್ಲಿ ಸಂಚರಿಸಿ ಅವರ ಕಷ್ಟ-ಸುಖದಲ್ಲಿ ಭಾಗಿಯಾದವರು. ಆದಿವಾಸಿಗಳಿಗೆ ಹಕ್ಕು ಕಲ್ಪಿಸಲು ನ್ಯಾಯಾಲಯದ ಮೆಟ್ಟಲೇರಿ ಹೋರಾಡಿದರು.
ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರಲು ಹೋರಾಟ
ಎಚ್.ಡಿ.ಕೋಟೆ ತಾಲೂಕಿನ ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿ ಒಟ್ಟು 6 ವರ್ಷ ಸೇವೆ ಸಲ್ಲಿಸಿದ್ದಾರೆ. ಒಮ್ಮೆ ಜಿಲ್ಲಾಧ್ಯಕ್ಷರಾಗಿಯೂ ಗಮನ ಸೆಳೆದಿದ್ದಾರೆ. ಸೋಮಣ್ಣ ಅವರು ಪ್ರಮುಖವಾಗಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದಾರೆ.
2016ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಆದರೆ ಕೊನೆಗಳಿಗೆಯಲ್ಲಿ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಲಾಗಿತ್ತು. ಇದರಿಂದ ಬೇಸರಗೊಂಡ ಸಾಹಿತಿ ದೇವನೂರ ಮಹದೇವ ಅವರು ಸಾರ್ವಜನಕರಿಂದ ದೇಣಿಗೆ ಸಂಗ್ರಹಿಸಿ 'ಜನ ರಾಜ್ಯೋತ್ಸವ' ಪ್ರಶಸ್ತಿ ಜೊತೆಗೆ 1 ಲಕ್ಷ ರೂ. ನೀಡಿ ಗೌರವಿಸಿದ್ದರು. ಇತ್ತೀಚಿಗೆ ಸೋಮಣ್ಣ ಅವರಿಗೆ ವಾಲ್ಮೀಕಿ ಪ್ರಶಸ್ತಿ ಬಂದಿತ್ತು. ಇದೀಗ ದೇಶದ 4ನೇ ಅತ್ಯುನ್ನತ ನಾಗರಿಕ ಗೌರವವಾದ 'ಪದ್ಮಶ್ರೀ'ಯೂ ಸೋಮಣ್ಣ ಅವರನ್ನು ಹುಡುಕಿಕೊಂಡು ಬಂದಿರುವುದು ಬುಡಕಟ್ಟು ಸಮುದಾಯದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.
"ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸಿಕ್ಕಿರುವುದು ತುಂಬಾ ಖುಷಿ ಕೊಟ್ಟಿದೆ. ನನ್ನ ಹೋರಾಟದಿಂದ ಒಂದಷ್ಟು ಜನರಿಗೆ ನ್ಯಾಯ ಸಿಕ್ಕಿದೆ. ಈ ಪ್ರಶಸ್ತಿ ಹಿಂದೆ ಸಾಕಷ್ಟು ಜನರ ಪರಿಶ್ರಮ ಇದೆ. ಅವರೆಲ್ಲರಿಗೂ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ" ಎಂದು ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications