ದಸರಾ ದೀಪಾಲಂಕಾರದಲ್ಲಿ ಚೀನಾ ವಸ್ತುಗಳ ಬಳಕೆಗೆ ಬ್ಯಾನ್

ಮೈಸೂರು, ಸೆಪ್ಟೆಂಬರ್ 26: ಕೋವಿಡ್ 19 ಕಾರಣದಿಂದಾಗಿ ಈ ಬಾರಿ ರಾಜ್ಯ ಸರ್ಕಾರ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿರುವ ಬೆನ್ನಲ್ಲೇ ಅಧಿಕಾರಿಗಳು ಈ ಬಾರಿ ಚೀನಾದ ಯಾವುದೇ ವಸ್ತುವನ್ನು ಬಳಸದೇ ಇರಲು ತೀರ್ಮಾನಿಸಿದ್ದಾರೆ.

ದಸರಾ ಎಂದರೆ ಇಡೀ ನಗರವನ್ನು ವಿದ್ಯುತ್‌ ದೀಪಾಲಂಕಾರಗಳಿಂದ ಅಲಂಕರಿಸುವ ಹಬ್ಬ. ಹೀಗಾಗಿ ದಸರಾ ಸಿದ್ಧತೆಯೂ ಸಾಗಿದ್ದು, ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್‌ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್‌ಗಳನ್ನು ಬದಲಾಯಿಸುವ ಕೆಲಸ ಆರಂಭವಾಗಿದೆ. ಆದರೆ ಈ ಬಾರಿಯ ದಸರೆಯ ದೀಪಾಲಂಕಾರದಲ್ಲಿ ಅಗ್ಗದ, ಚೀನಾದ ಬಲ್ಬ್‌ಗಳನ್ನು ಬಳಸದಿರಲು ನಿರ್ಧರಿಸಲಾಗಿದೆ.

ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಚೀನಾ ಆಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದ್ದು, ಕೆಲ ವಸ್ತುಗಳ ಆಮದಿನ ಮೇಲೂ ನಿರ್ಬಂಧ ವಿಧಿಸಲಾಗಿದೆ. ಬದಲಿಗೆ ಆತ್ಮ ನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದೇ ಕಾರಣದಿಂದ ದಸರೆಯಲ್ಲಿ ಚೀನಾ ಎಲ್‌ಇಡಿ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗುತ್ತಿದೆ.

Mysuru Dasara 2020: Palace Administration Decided Not to Use Chinese LED Bulbs for Decoration

ಮೈಸೂರು ದಸರಾ ವೇಳೆ ರಸ್ತೆಗಳಿಗೆ, ವೃತ್ತಗಳಿಗೆ, ಅರಮನೆಗೆ, ದೇವಾಲಯಗಳಿಗೆ, ಪ್ರತಿಮೆಗಳಿಗೆ ದೀಪಾಲಂಕಾರ ಮಾಡಲಾಗುತ್ತದೆ. ಇದಕ್ಕಾಗಿ ಮುಂಬೈ, ದೆಹಲಿ ಮತ್ತು ಕೊಲ್ಕತ್ತಾದಿಂದ ಬಲ್ಬ್‌ಗಳು ಹಾಗೂ ವಿವಿಧ ಬಿಡಿಭಾಗಗಳನ್ನು ತರಿಸಿಕೊಳ್ಳಲಾಗುತ್ತದೆ. ಈ ಬಾರಿ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಚೀನಾದ ಯಾವುದೇ ವಸ್ತುಗಳನ್ನು ದಸರಾ ದೀಪಾಲಂಕಾರದಲ್ಲಿ ಬಳಸದಿರಲು ನಿರ್ಧರಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ತಿಳಿಸಿದ್ದಾರೆ.

Recommended Video

      China - Pakistan ಒಟ್ಟಿಗೆ ಬಂದ್ರು ನಾವ್ Ready to Fight | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+