ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಲಕಾಡಿನಲ್ಲಿ ಪಂಚಲಿಂಗ ದರ್ಶನ: ಪಂಚಲಿಂಗಗಳ ಸಂಕ್ಷಿಪ್ತ ಮಾಹಿತಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 14: ಮೈಸೂರು ಜಿಲ್ಲೆಯ ಕಾವೇರಿ ನದಿ ತಟದಲ್ಲಿರುವ ಐತಿಹಾಸಿಕ ತಲಕಾಡು ಪಂಚಲಿಂಗ ದರ್ಶನಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಅವರಿಂದ ಸೋಮವಾರ ಮುಂಜಾನೆ ವಿದ್ಯುಕ್ತ ಚಾಲನೆ ದೊರೆಯಿತು.

ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ, ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕವು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೆರವೇರಿತು. ಈ ಹಿಂದೆ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆದಿತ್ತು.

ವೈದ್ಯನಾಥೇಶ್ವರ

ವೈದ್ಯನಾಥೇಶ್ವರ

ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ. ಇದರಿಂದ ಶಿವನನ್ನು ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತದೆ. ಈ ಕಾರಣದದ ಇಲ್ಲಿ‌ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತದೆ.

ಐತಿಹಾಸಿಕ ತಲಕಾಡು ಪಂಚಲಿಂಗ ದರ್ಶನಕ್ಕೆ ವಿದ್ಯುಕ್ತ ಚಾಲನೆಐತಿಹಾಸಿಕ ತಲಕಾಡು ಪಂಚಲಿಂಗ ದರ್ಶನಕ್ಕೆ ವಿದ್ಯುಕ್ತ ಚಾಲನೆ

ಅರ್ಕನಾಥೇಶ್ವರ

ಅರ್ಕನಾಥೇಶ್ವರ

ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ‌‌. ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ‌.

ಪಾತಾಳೇಶ್ವರ

ಪಾತಾಳೇಶ್ವರ

ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ. ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.

ತಲಕಾಡು: ಅಂದು ರಾಜಧಾನಿ, ಇಂದು ಹೋಬಳಿ ಕೇಂದ್ರ!ತಲಕಾಡು: ಅಂದು ರಾಜಧಾನಿ, ಇಂದು ಹೋಬಳಿ ಕೇಂದ್ರ!

ಮರಳೇಶ್ವರ

ಮರಳೇಶ್ವರ

ತಲಕಾಡಿನ ಮರಳಿಗೆಲ್ಲ ಒಡೆಯನೆಂದೇ ಮರಳೇಶ್ವರನನ್ನು ಕರೆಯಲಾಗುತ್ತದೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು‌ ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರ ನೀಡಿದ ಎಂದು ಹೇಳಲಾಗುವುದು. ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ‌ ಸಹ ಇದೆ.

ಮಲ್ಲಿಕಾರ್ಜುನೇಶ್ವರ

ಮಲ್ಲಿಕಾರ್ಜುನೇಶ್ವರ

ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರ ಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನು ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ.

ಹೇಗಿರಲಿದೆ ಪಂಚಲಿಂಗ ದರ್ಶನದ ವಿಧಿ ವಿಧಾನಗಳು...ಹೇಗಿರಲಿದೆ ಪಂಚಲಿಂಗ ದರ್ಶನದ ವಿಧಿ ವಿಧಾನಗಳು...

English summary
The historic Talakadu Panchalinga darshana on the banks of the Cauvery River in Mysuru district Started On Monday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X