ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್ ಎಸ್ ಬಳಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಪಾರ್ಕಿಂಗ್ ದಂಧೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 24 : ಕೆಆರ್'ಎಸ್ ನ ಬ್ಯಾಕ್ ವಾಟರ್ ಪ್ರದೇಶದಲ್ಲಿ ಪಾರ್ಕಿಂಗ್ ದಂಧೆ ಹೆಚ್ಚಾಗಿದ್ದು, ಪ್ರವಾಸಿಗರ ಜೇಬಿಗೆ ಕತ್ತರಿ ಬೀಳುತ್ತಿದೆ. ಶುಲ್ಕದ ವಸೂಲಿ ನೆಪದಲ್ಲಿ ಎಗ್ಗಿಲ್ಲದೇ ಅಕ್ರಮ ವಸೂಲಿ ದಂಧೆ ನಡೆಯುತ್ತಿದೆ. ವಾಹನಗಳ ಪಾರ್ಕಿಂಗ್ ರದ್ದಾಗಿದ್ದರೂ ವಸೂಲಿ ದಂಧೆ ನಿಂತಿಲ್ಲ.

ತಾಲೂಕಿನ ಹಳೆ ಉಂಡುವಾಡಿ ಗ್ರಾಮದ ಬಳಿ ಹಣ ಸುಲಿಗೆ ನಡೆಯುತ್ತಿದೆ. ಕಾರಿಗೆ 50 ರೂ. ಹಾಗೂ ಸ್ಕೂಟರಿಗೆ 20 ರೂ. ಅನ್ನು ಸ್ಥಳೀಯ ಯುವಕರು ವಸೂಲಿ ಮಾಡುತ್ತಿದ್ದಾರೆ.

ಕೆಐಎ: ಹೆಚ್ಚುವರಿ 500 ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಲಾಟ್ಕೆಐಎ: ಹೆಚ್ಚುವರಿ 500 ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಲಾಟ್

ಮೈಸೂರು ತಾಲೂಕಿನ ಹಳೆ ಆನಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ರಶೀದಿಗಳನ್ನು ಬಳಕೆ ಮಾಡಿಕೊಂಡು ಯುವಕರು ಕೆ.ಆರ್.ಎಸ್ ಹಿನ್ನೀರಿನ ದ್ವೀಪ ಪ್ರದೇಶಕ್ಕೆ ತೆರಳುವ ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದಾರೆ.

Parking fare in the KRS backwater area has increased

ಈ ದಂಧೆ ನಿರಂತರವಾಗಿ ನಡೆಯುತ್ತಿದೆ. ಅನಧಿಕೃತ ರಶೀದಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಯಾರೂ ಗಮನಹರಿಸುತ್ತಿಲ್ಲ. ಇನ್ನು ಈ ಬಗ್ಗೆ ಪ್ರಶ್ನೆ ಮಾಡುವ ಪ್ರವಾಸಿಗರ ಮೇಲೆ ದಬ್ಬಾಳಿಕೆ ಕೂಡ ನಡೆಯುತ್ತಿದೆ.

ಹಿನ್ನೀರಿನಲ್ಲಿರುವ ದ್ವೀಪ ಪ್ರದೇಶ ಅಸುರಕ್ಷಿತ ಎಂಬ ಕಾರಣಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೂ ಹೀಗೆ ಪಾರ್ಕಿಂಗ್ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಹೀಗೆ ವಸೂಲಿ ನಡೆಯುತ್ತಿರುವುದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ದಂಧೆಯನ್ನು ಬಯಲು ಮಾಡಿದ್ದಾರೆ.

ಆದರೆ ಪೊಲೀಸರು ಈ ಕುರಿತಾಗಿ ಕ್ರಮ ಕೈಗೊಳ್ಳುವರೇ ಕಾದು ನೋಡಬೇಕಿದೆ.

English summary
Parking fare in the KRS backwater area has increased. Money laundering is being held near Old Unduvadi village in Mysuru taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X