ಮೈಸೂರಿನ ಕಲಾಮಂದಿರದಲ್ಲಿ ಪಾರ್ಶ್ವ ಸಂಗೀತ ನಾಟಕ ಪ್ರದರ್ಶನ
ಮೈಸೂರು, ಜೂನ್ 27: ನಗರದ ಕಲಾಮಂದಿರದಲ್ಲಿ ಪಾರ್ಶ್ವಸಂಗೀತ ನಾಟಕ ಪ್ರದರ್ಶನ ಜೂನ್ 29ರಿಂದ ಜುಲೈ 1ರವರೆಗೆ ಪ್ರತಿ ದಿನ ಸಂಜೆ 7 ಗಂಟೆಗೆ ನಡೆಯಲಿದೆ.
ಸಾಹಿತಿ ಶ್ರೀನಿವಾಸವೈದ್ಯ ಅವರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕವನ್ನು ರಂಗವಲ್ಲಿ ನಾಟಕ ತಂಡವು ಪ್ರಸ್ತುತಪಡಿಸುತ್ತಿದೆ. ರಂಗಾಯಣದ ಹಿರಿಯ ಕಲಾವಿದ ಪ್ರಶಾಂತ್ ಹಿರೇಮಠ ನಾಟಕವನ್ನು ನಿರ್ದೇಶಿಸಿದ್ದಾರೆ.
ನಾಟಕ ಕುರಿತು: ಪಾರ್ಶ್ವ ಸಂಗೀತ ನಾಟಕವು ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ ಸಂಬಂಧವನ್ನು ತೆರೆದಿಡುತ್ತದೆ. ಅಂದಿನ ಕಾಲದ ಅದ್ಭುತ ಹಾಡುಗಳು, ಸಂಗೀತ ನಮ್ಮನ್ನು ಬೇರೊಂದು ಲೋಕಕ್ಕೆ ಕರೆದೊಯ್ಯುತ್ತದೆ.

ಹಿಂದಿ ಗಾನಲೋಕದಲ್ಲಿ ದಂತಕತೆಗಳೆನಿಸಿದ ಕೆ.ಎಲ್.ಸೈಗಲ್, ತಲತ್ ಮಹಮೂದ್, ಮಹಮದ್ ರಫಿ, ಕಿಶೋರ್ಕುಮಾರ್, ಶಂಶಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೇ ಮುಂತಾದವರ ಸುಶ್ರಾವ್ಯ ಕಂಠ ನಮ್ಮ ಹೃದಯದ ತಂತಿಗಳನ್ನು ಮೀಟಿ ಭಾವತರಂಗಗಳನನ್ನು ಎಬ್ಬಿಸುವ ಪರಿಯನ್ನು ಈ ನಾಟಕದ ಮೂಲಕ ಕಟ್ಟಿಕೊಡಲಾಗಿದೆ.
ಈ ನಾಟಕದ ನಿರೂಪಕ ತನ್ನ ಬಾಲ್ಯದ ಅನುಭವದ ಮೂಲಕ ಆ ಕಾಲದ ಹಿಂದಿ ಚಿತ್ರ ಸಂಗೀತದ ಸುವರ್ಣ ಯುಗವನ್ನು ನೆನಪಿಸಿಕೊಳ್ಳುತ್ತಾನೆ. ಅಪ್ರತಿಮ ಚಿತ್ರಪ್ರೇಮಿಯಾದ ತನ್ನ ಚಿಕ್ಕಪ್ಪನ ಜೀವನಗಾಥೆಯನ್ನು ಪ್ರೇಕ್ಷಕರೆದುರು ಹರವಿಡುತ್ತಾನೆ.

ಸುಮಾರು 25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿರುವ ಈ ನಾಟಕದ ರಂಗರೂಪ-ಬಿ.ಪಿ.ಅರುಣ್. ಸಂಗೀತ ನಿರ್ವಹಣೆ -ವಿಶ್ವಾಸ್ ಕೃಷ್ಣ, ರಂಗವಿನ್ಯಾಸ-ಹೆಚ್.ಕೆ.ದ್ವಾರಕಾನಾಥ್ ಬೆಳಕಿನ ವಿನ್ಯಾಸ-ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ-ನಂದಿನಿ ಕೆ.ಆರ್., ನೃತ್ಯಸಂಯೋಜನೆ-ಕಾರ್ತಿಕ್ ಉಪಮನ್ಯು, ರಂಗನಿರ್ವಹಣೆ-ಸೀಮಂತಿನಿ ಬಿ., ಮಹೇಶ್ ಕುಮಾರ್ ಸಹ-ನಿರ್ದೇಶನ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications