ಮೈಸೂರಿನಲ್ಲಿ ಶ್ರೀನಿವಾಸ ವೈದ್ಯರ ಪಾರ್ಶ್ವ ಸಂಗೀತ ನಾಟಕ ಪ್ರದರ್ಶನ
ಮೈಸೂರು,ಆಗಸ್ಟ್ 23: ನಗರದ ಕಲಾಮಂದಿರದಲ್ಲಿ ಪಾರ್ಶ್ವಸಂಗೀತ ನಾಟಕ ಪ್ರದರ್ಶನ ಆಗಸ್ಟ್ 25 ಹಾಗೂ 26ರಂದು ಸಂಜೆ 7 ಗಂಟೆಗೆ ನಡೆಯಲಿದೆ.ಸಾಹಿತಿ ಶ್ರೀನಿವಾಸವೈದ್ಯ ಅವರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕವನ್ನು ರಂಗವಲ್ಲಿ ನಾಟಕ ತಂಡವು ಪ್ರಸ್ತುತಪಡಿಸುತ್ತಿದೆ.
ರಂಗಾಯಣದ ಹಿರಿಯ ಕಲಾವಿದ ಪ್ರಶಾಂತ್ ಹಿರೇಮಠ ನಾಟಕವನ್ನು ನಿರ್ದೇಶಿಸಿದ್ದಾರೆ.
ನಾಟಕ ಕುರಿತು: ಪಾರ್ಶ್ವ ಸಂಗೀತ ನಾಟಕವು ರ ದಶಕದಿಂದ 70ರ ದಶಕಗಳವರೆಗಿನ ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ ಸಂಬಂಧವನ್ನು ತೆರೆದಿಡುತ್ತದೆ.

ಅಂದಿನ ಕಾಲದ ಅದ್ಭುತ ಹಾಡುಗಳು, ಸಂಗೀತ ನಮ್ಮನ್ನು ಬೇರೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಹಿಂದಿ ಗಾನಲೋಕದಲ್ಲಿ ದಂತಕತೆಗಳೆನಿಸಿದ ಕೆ.ಎಲ್.ಸೈಗಲ್, ತಲತ್ ಮಹಮೂದ್, ಮಹಮದ್ ರಫಿ, ಕಿಶೋರ್ಕುಮಾರ್, ಶಂಶಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೇ ಮುಂತಾದವರ ಸುಶ್ರಾವ್ಯ ಕಂಠ ನಮ್ಮ ಹೃದಯದ ತಂತಿಗಳನ್ನು ಮೀಟಿ ಭಾವತರಂಗಗಳನನ್ನು ಎಬ್ಬಿಸುವ ಪರಿಯನ್ನು ಈ ನಾಟಕದ ಮೂಲಕ ಕಟ್ಟಿಕೊಡಲಾಗಿದೆ.
ಈ ನಾಟಕದ ನಿರೂಪಕ ತನ್ನ ಬಾಲ್ಯದ ಅನುಭವದ ಮೂಲಕ ಆ ಕಾಲದ ಹಿಂದಿ ಚಿತ್ರ ಸಂಗೀತದ ಸುವರ್ಣ ಯುಗವನ್ನು ನೆನಪಿಸಿಕೊಳ್ಳುತ್ತಾನೆ. ಸುಮಾರು 25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿರುವ ಈ ನಾಟಕದ ರಂಗರೂಪ-ಬಿ.ಪಿ.ಅರುಣ್. ಸಂಗೀತ ನಿರ್ವಹಣೆ -ವಿಶ್ವಾಸ್ ಕೃಷ್ಣ, ರಂಗವಿನ್ಯಾಸ-ಹೆಚ್.ಕೆ.ದ್ವಾರಕಾನಾಥ್ ಬೆಳಕಿನ ವಿನ್ಯಾಸ-ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ-ನಂದಿನಿ ಕೆ.ಆರ್., ನೃತ್ಯಸಂಯೋಜನೆ-ಕಾರ್ತಿಕ್ ಉಪಮನ್ಯು, ರಂಗನಿರ್ವಹಣೆ-ಸೀಮಂತಿನಿ ಬಿ., ಮಹೇಶ್ ಕುಮಾರ್ ಸಹ-ನಿರ್ದೇಶನ ನೀಡಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications