• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

30 ರೈಲುಗಳ ಸಂಚಾರ ರದ್ದು; ಮೈಸೂರಿನಲ್ಲಿ ಪ್ರಯಾಣಿಕರ ಪರದಾಟ

|

ಮೈಸೂರು, ಜೂನ್ 17: ನವೀಕರಣ ಕಾಮಗಾರಿ ಸೇರಿದಂತೆ ನಗರದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಬೆಂಗಳೂರು, ಶಿವಮೊಗ್ಗ, ಹಾಸನ ಹಾಗೂ ಚಾಮರಾಜನಗರಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ನಗರದ ಕೇಂದ್ರ ರೈಲ್ವೆ ನಿಲ್ದಾಣ ಹಾಗೂ ಹಳ್ಳಿಗಳಲ್ಲಿ ನಾನ್ ಇಂಟರ್ ಲಾಕಿಂಗ್ ಆಧುನಿಕ ವ್ಯವಸ್ಥೆ ಅಳವಡಿಸುತ್ತಿರುವುದರಿಂದ ಇದೇ ಜೂನ್ 23ರವರೆಗೆ ಮೈಸೂರಿನಿಂದ ವಿವಿಧೆಡೆಗೆ ಪ್ರಯಾಣಿಸುತ್ತಿದ್ದ 30 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

ನೈರುತ್ಯ ರೈಲ್ವೆ ಕಾಮಗಾರಿ: ತಾತ್ಕಾಲಿಕವಾಗಿ ಹಲವು ರೈಲುಗಳು ರದ್ದು

ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್‌ಟಿಸಿ ಗ್ರಾಮಾಂತರ ವಿಭಾಗವು ಜೂನ್ 23ರವರೆಗೆ ಮೈಸೂರು- ಬೆಂಗಳೂರು ಮಾರ್ಗವಾಗಿ ಹೆಚ್ಚುವರಿ 50 ಬಸ್‌ಗಳನ್ನು ನಿಯೋಜಿಸಿದೆ. ನಗರ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಬಸ್‌ಗಳು ಸಿಗದೆ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ರೈಲು ಸಂಚಾರದಲ್ಲಿ ಉಂಟಾಗಿರುವ ವ್ಯತ್ಯಯದ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಆದರೂ ರೈಲು ನಿಲ್ದಾಣಕ್ಕೆ ಜನ ಬಂದು ಹೋಗುತ್ತಿದ್ದಾರೆ. ಬಸ್ ನಿಲ್ದಾಣಕ್ಕೆ ಹೋಗಲು ಆಟೊ ರಿಕ್ಷಾಗಳಲ್ಲಿ ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿದ್ದದ್ದು ಕಂಡುಬಂತು.

ತುಮಕೂರು-ಗುಬ್ಬಿ ಜೋಡಿ ಹಳಿ ರೈಲು ಸಂಚಾರಕ್ಕೆ ಮುಕ್ತ

ರೈಲುಗಳ ಸಂಚಾರ ರದ್ದಾದ ಪರಿಣಾಮ ಪ್ರಯಾಣಿಕರಿಗೆ ಪರ್ಯಾಯವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ರೈಲಿಗಿಂತ ಬಸ್ ಪ್ರಯಾಣ ದರ ಹೆಚ್ಚಾದ್ದರಿಂದ ಪ್ರಯಾಣಿಕರಿಗೆ ಹೊರೆಯಾಗಿ ಪರಿಣಮಿಸಿದೆ. ದವಸ ಧಾನ್ಯ ಸೇರಿದಂತೆ ಬಹಳಷ್ಟು ಲಗೇಜ್ ಗಳನ್ನು ತೆಗೆದುಕೊಂಡು ಬಂದಿದ್ದ ಪ್ರಯಾಣಿಕರು ಬಸ್ ನಲ್ಲಿ ಹೋಗಲು ಹಿಂದೇಟು ಹಾಕಿದರು. ಕೆಲವರು ಖಾಸಗಿ ವಾಹನಗಳ ಮೊರೆ ಹೋದರು.

ಹಿಂದಿ ಅಥವಾ ಇಂಗ್ಲಿಷ್‌ನಲ್ಲಿಯೇ ಮಾತಾಡಿ: ಸುತ್ತೋಲೆ ಹಿಂಪಡೆದ ದಕ್ಷಿಣ ರೈಲ್ವೆ

ಮೈಸೂರು - ಬೆಂಗಳೂರು ನಡುವೆ ನಿತ್ಯ 500ಕ್ಕೂ ಹೆಚ್ಚು ಬಸ್ ಗಳು ಸಂಚರಿಸುತ್ತವೆ. ಈಗ ರೈಲು ಸಂಚಾರ ವ್ಯತ್ಯಯಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸಂಚರಿಸಲಿದೆ. ಚಾಮರಾಜನಗರ, ಶಿವಮೊಗ್ಗ, ಹಾಸನ, ಅರಸೀಕೆರೆ, ಕೆ.ಆರ್ ನಗರಕ್ಕೆ ಹೆಚ್ಚುವರಿ ಬಸ್ ಸಂಚಾರ ಪ್ರಾರಂಭವಾಗಲಿದೆ. ಬೇಡಿಕೆ ನೋಡಿಕೊಂಡು ಮತ್ತಷ್ಟು ಬಸ್ ಸಂಚಾರ ಹೆಚ್ಚಿಸುವುದಕ್ಕೆ ಸಾರಿಗೆ ಸಂಸ್ಥೆ ಈಗಾಗಲೇ ತೀರ್ಮಾನ ಕೈಗೊಂಡಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Railway Passengers Hit Hard due to trains cancelled from Mysuru to various places. Over 30 trains have been cancelled and around 15 have been partially cancelled, five trains have either been rescheduled or diverted. KSRTC has allocated 45 additional buses for the convenience of the passengers to bangalore, Hassan and Chamarajanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more