ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

3ನೇ ಅಲೆ; ಮೈಸೂರು ಪಾಲಿಕೆಯಿಂದ ಪೀಡಿಯಾಟ್ರಿಕ್ ಕೇರ್ ಸೆಂಟರ್ ಆರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 23; ಕೊರೊನಾ 2ನೇ ಅಲೆಯ ಆರ್ಭಟ ಸ್ವಲ್ಪಮಟ್ಟಿಗೆ ಇಳಿಮುಖವಾಗುವ ನಿರೀಕ್ಷೆ ಹೆಚ್ಚಾಗಿರುವ ನಡುವೆಯೇ ಮೂರನೇ ಅಲೆಯ ಆತಂಕ ಶುರುವಾಗಿದೆ. 3ನೇ ಅಲೆಯ ಆಘಾತವನ್ನು ಸಮರ್ಪಕವಾಗಿ ಎದುರಿಸಲು ಮೈಸೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಪಾಲಿಕೆ ಮುಂದಾಗಿದೆ.

ಮುಂದಿನ ಕೆಲವು ತಿಂಗಳಗಳಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾದ ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಆತಂಕ ಜೋರಾಗಿದೆ‌. ಈ ಹಿನ್ನೆಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎನ್ನುವ ಕೊರೊನಾ ನಿಯಂತ್ರಿಸಲು ಪಾಲಿಕೆಯಿಂದ ಕ್ರಮವಹಿಸಿದೆ.

ಮೈಸೂರು; 16 ಖಾಸಗಿ ಕೋವಿಡ್ ಕೇರ್ ಸೆಂಟರ್ ಮುಚ್ಚಲು ಆದೇಶ ಮೈಸೂರು; 16 ಖಾಸಗಿ ಕೋವಿಡ್ ಕೇರ್ ಸೆಂಟರ್ ಮುಚ್ಚಲು ಆದೇಶ

ಪ್ರಮುಖವಾಗಿ ಮೈಸೂರಿನಲ್ಲಿ ಪೀಡಿಯಾಟ್ರಿಕ್ ಕೋವಿಡ್ ಕೇರ್ ಆರಂಭಕ್ಕೆ ಪಾಲಿಕೆ ಮುಂದಾಗಿದ್ದು, ಪರಿಸ್ಥಿತಿ ಕೈಮೀರದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. "ಪಾಲಿಕೆ ವ್ಯಾಪ್ತಿಯಲ್ಲಿ 150 ಮಕ್ಕಳ ತಜ್ಞರಿದ್ದು, ಜೊತೆಗೆ ಮಕ್ಕಳಿಗೆ ಅಗತ್ಯವಿರುವ ಐಸಿಯು ಮತ್ತು ಇನ್ನಿತರ ಉಪಕರಣಗಳ ಕುರಿತು ಪಾಲಿಕೆ ವತಿಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ" ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ.

ಮೈಸೂರು: ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರಮೈಸೂರು: ಕೊರೊನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ

Pediatric Covid Care Centre In Mysuru Soon

"ದೊಡ್ಡವರಿಗೆ ನೀಡುವಂತೆ ಮಾತ್ರೆಗಳನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಪೀಡಿಯಾಟ್ರಿಕ್ ಮೆಡಿಕಲ್ ಕಿಟ್ ತಯಾರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸದ್ಯ ಮೈಸೂರಿನಲ್ಲಿ ದಿನಕ್ಕೆ ನಾಲೈದು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವ ಕಾರಣ ಅವರಿಗೆ ಸೋಂಕು ತಗುಲಿದರೂ ಅಪಾಯದ ಮಟ್ಟ ತಲುಪಿಲ್ಲ" ಎಂದು ತಿಳಿಸಿದರು.

ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ

"ಈ ಕುರಿತು ನಿರ್ಲಕ್ಷ್ಯ ತೋರದೆ ಮುಂಜಾಗ್ರತೆಯ ಕ್ರಮ ತೆಗೆದುಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ 3ನೇ ಅಲೆಯ ಕೊರೊನಾ ಆತಂಕ ಎದುರಿಸಲು ಅಗತ್ಯ ಮುಂಜಾಗ್ರತಾ ಕ್ರಮ ಹಾಗೂ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ" ಎಂದು ಶಿಲ್ಪಾನಾಗ್ ಹೇಳಿದ್ದಾರೆ.

English summary
Mysuru city corporation commissioner Shilpa Nag said that pediatric Covid care centre will set up in city to control Covid 3rd wave.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X