ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಕ್ಕರಹಳ್ಳಿಯಲ್ಲಿ ಪೆಲಿಕಾನ್ ಸಾವು; ಹಕ್ಕಿಜ್ವರ ಕಾರಣವಲ್ಲ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 30: ಕುಕ್ಕರಹಳ್ಳಿ ಕೆರೆಯಲ್ಲಿ ಇತ್ತೀಚೆಗೆ ಎರಡು ಪೆಲಿಕಾನ್ ಪಕ್ಷಿಗಳು ಸಾವನ್ನಪ್ಪಿದ್ದು, ಇವುಗಳ ಸಾವಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ದೊರೆತಿದೆ. ಪೆಲಿಕಾನ್ ಹಕ್ಕಿಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಹಕ್ಕಿ ಜ್ವರದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆಹಕ್ಕಿ ಜ್ವರದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ

ಕುಕ್ಕರಹಳ್ಳಿ ಕೆರೆಯ ಪ್ರವೇಶದ್ವಾರದಲ್ಲಿ ಅ.25ರಂದು ಸ್ಪಾಟ್‌ ಬಿಲ್ಡ್ ಪೆಲಿಕಾನ್ ಎಂಬ ಪಕ್ಷಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಮೂರು ದಿನದ ನಂತರ ಮತ್ತೊಂದು ಹಕ್ಕಿಯೂ ಸಾವನ್ನಪ್ಪಿತ್ತು. ಹೀಗೆ ಮೇಲಿಂದ ಮೇಲೆ ಪೆಲಿಕಾನ್ ಪಕ್ಷಿಗಳು ಸಾವಿಗೀಡಾಗುತ್ತಿರುವುದಕ್ಕೆ ಹಕ್ಕಿ ಜ್ವರದ ಕಾರಣವಿರಬಹುದು ಎಂಬ ಆತಂಕ ವ್ಯಕ್ತವಾಗಿತ್ತು.

Pelican Death At Kukkarahalli Of Mysuru Is Not From Bird flu

ಬೆಂಗಳೂರಿನಲ್ಲಿ ಹಕ್ಕಿಜ್ವರ: ಮೈಸೂರು ಮೃಗಾಲಯದಲ್ಲಿ ಕಟ್ಟೆಚ್ಚರಬೆಂಗಳೂರಿನಲ್ಲಿ ಹಕ್ಕಿಜ್ವರ: ಮೈಸೂರು ಮೃಗಾಲಯದಲ್ಲಿ ಕಟ್ಟೆಚ್ಚರ

ಬೆಂಗಳೂರಿನ ಇನ್‌ಸ್ಪಿಟ್ಯೂಟ್ ಆಫ್‌ ಅನಿಮಲ್ ಹೆಲ್ತ್ ಅಂಡ್‌ ವೆಟರ್ನರಿ ಬಯಾಲಜಿಕಲ್ಸ್ ಎಂಬ ಪ್ರಯೋಗಾಲಯದ ತಜ್ಞರು ನೀಡಿರುವ ಪ್ರಾಥಮಿಕ ವರದಿಯಲ್ಲಿ ಹಕ್ಕಿಗಳ ಸಾವಿಗೆ ಹಕ್ಕಿಜ್ವರ ಅಥವಾ ಇನ್ನಿತರ ಸಾಂಕ್ರಾಮಿಕ ರೋಗಗಳು ಕಾರಣವಲ್ಲ ಎಂದು ದೃಢಪಡಿಸಿದ್ದಾರೆ. ಜನರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

English summary
Two pelican birds have recently died in Kukkarahalli Lake. According to preliminary reports, DCF Prashant Kumar clarifies that bird flu is not the cause of death of pelicans
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X