ಚಾಮುಂಡಿ ಬೆಟ್ಟದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ
ಮೈಸೂರು, ಜುಲೈ 26: ಚಾಮುಂಡಿ ಬೆಟ್ಟದಿಂದ ವಾಪಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದರ ಬ್ರೇಕ್ ಏರ್ ಪೈಪ್ ತುಂಡಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾದ ಭಾರಿ ಅನಾಹುತವೊಂದು ತಪ್ಪಿದೆ.
ಕಡೆಯ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ನಡುವೆ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಏರ್ ಪೈಪ್ ತುಂಡಾಗಿದೆ. ಇದನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ತಡೆಗೋಡೆಗೆ ತಗಲುವಂತೆ ಮಾಡಿ ನಿಯಂತ್ರಿಸಿದ್ದಾರೆ. ಈ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.

ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಶ್ಲಾಘಿಸಿದ್ದಾರೆ.












Click it and Unblock the Notifications