ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು: ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ
ಮೈಸೂರು, ಜುಲೈ 23: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಅರಸರ ಹೆಸರಿಡಲು ಅನುಮೋದನೆ ನೀಡಲಾಗಿತ್ತು.
ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು. ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು.
ಪ್ರತಾಪ್ ಸಿಂಹ ಮತ್ತು ಮೈಸೂರು ಜನತೆಯ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಕ್ಯಾಬಿನೆಟ್ ನಿರ್ಧಾರದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಸಂತಸಗೊಂಡಿರುವ ಸಂಸದ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ಪ್ರತಾಪ ಸಿಂಹ ಟ್ವೀಟ್ ಮಾಡಿದ್ದಾರೆ.

ಧನ್ಯವಾದ ತಿಳಿಸಿದ ಪ್ರತಾಪ್ ಸಿಂಹ
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಅನುಮೋದನೆ ಪತ್ರವನ್ನು ಹಂಚಿಕೊಂಡಿದ್ದು, ನನ್ನ ಬೇಡಿಕೆಗೆ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ್ದಾರೆ. ಹೆಸರು ಬದಲಾವಣೆ ಜೊತೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದ ಉನ್ನತೀಕರಣಕ್ಕಾಗಿ 9.93 ಕೋಟಿ ರು.ಗಳನ್ನು ನೀಡಲು ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂಬ ನನ್ನ ಬೇಡಿಕೆಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಒಪ್ಪುಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ @BSBommai ಧನ್ಯವಾದಗಳು. ಮೂಲಭೂತ ಸೌಕರ್ಯ ಖಾತೆ ಸಚಿವರಾದ ವಿ. ಸೋಮಣ್ಣ ಸರ್ ಹಾಗು ಉಸ್ತುವಾರಿ ಸಚಿವರಾದ ಎಸ್ಟಿ ಸೋಮಶೇಖರ್ ಸರ್ ರಿಗೂ ಕೃತಜ್ಞತೆಗಳು. pic.twitter.com/Kn97VmB5A1
— Pratap Simha (@mepratap) July 22, 2022
ಮೈಸೂರು ರಾಜಮನೆತನಕ್ಕೆ ಸಂದ ಗೌರವ
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಟ್ಟಿರುವುದಕ್ಕೆ ಸಾಕಷ್ಟು ಜನ ಸಂತಸ ವ್ಯಕ್ತಪಡಿಸಿದ್ದಾರೆ. ಬಹಳ ದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. "ರಾಜ್ಯ ಬಿಜೆಪಿ ಸರ್ಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ನಿರ್ಧರಿಸಿದ್ದು ಸ್ವಾಗತಾರ್ಹ ಮತ್ತು ಅಭಿನಂದನೀಯ. ನಾಡಿಗೆ ಅತ್ಯಮೂಲ್ಯ ಕೊಡುಗೆ ನೀಡಿದ ಮೈಸೂರು ರಾಜಮನೆತನಕ್ಕೆ ಗೌರವ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.
ರಾಜ್ಯ @BJP4Karnataka ಸರ್ಕಾರ ಮೈಸೂರು ವಿಮಾನ ನಿಲ್ದಾಣಕ್ಕೆ #ನಾಲ್ವಡಿ_ಕೃಷ್ಣರಾಜ_ಒಡೆಯರ್ ಅವರ ಹೆಸರಿಡಲು ನಿರ್ಧರಿಸಿದ್ದು ಸ್ವಾಗತಾರ್ಹ & ಅಭಿನಂದನೀಯ.
— Vijayendra Yeddyurappa (@BYVijayendra) July 23, 2022
ನಾಡಿಗೆ ಅತ್ಯಮೂಲ್ಯ ಕೊಡುಗೆ ನೀಡಿದ ಮೈಸೂರು ರಾಜಮನೆತನಕ್ಕೆ ಗೌರವ ಸೂಚಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ@BSBommai ಅವರಿಗೆ ಅಭಿನಂದನೆಗಳು.💐🙏 pic.twitter.com/NJIq7LAnTu
ಶಾಸಕ ರಾಮದಾಸ್ ಸಂತಸ
ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಕೂಡ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. "ಮೈಸೂರು ಸಂಸ್ಥಾನದ ಪ್ರಭುಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತವು ಸಮಾಜಕ್ಕೆ ಮಾದರಿಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಮೈಸೂರು ಸಂಸ್ಥಾನದ ಪ್ರಭುಗಳಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತವು ಸಮಾಜಕ್ಕೆ ಮಾದರಿಯಾಗಿದೆ,
— S A Ramadass (@ramadassmysuru) July 23, 2022
ಮೈಸೂರು ವಿಮಾನ ನಿಲ್ದಾಣಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ನಿರ್ಧರಿಸಿದೆ.💐 pic.twitter.com/1KNl19qM28
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications