ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು: ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ

|
Google Oneindia Kannada News

ಮೈಸೂರು, ಜುಲೈ 23: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಅರಸರ ಹೆಸರಿಡಲು ಅನುಮೋದನೆ ನೀಡಲಾಗಿತ್ತು.

ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು. ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು.

ಕಡೇ ಆಷಾಢ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರಕಡೇ ಆಷಾಢ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ

ಪ್ರತಾಪ್ ಸಿಂಹ ಮತ್ತು ಮೈಸೂರು ಜನತೆಯ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಕ್ಯಾಬಿನೆಟ್ ನಿರ್ಧಾರದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಸಂತಸಗೊಂಡಿರುವ ಸಂಸದ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ಪ್ರತಾಪ ಸಿಂಹ ಟ್ವೀಟ್ ಮಾಡಿದ್ದಾರೆ.

People Praised The Government Decision To Rename Mysore Airport Nalvadi Krishnaraja Wodeyar Airport

ಧನ್ಯವಾದ ತಿಳಿಸಿದ ಪ್ರತಾಪ್ ಸಿಂಹ

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಅನುಮೋದನೆ ಪತ್ರವನ್ನು ಹಂಚಿಕೊಂಡಿದ್ದು, ನನ್ನ ಬೇಡಿಕೆಗೆ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ್ದಾರೆ. ಹೆಸರು ಬದಲಾವಣೆ ಜೊತೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಜಮೀನು ಹಸ್ತಾಂತರ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದ ಉನ್ನತೀಕರಣಕ್ಕಾಗಿ 9.93 ಕೋಟಿ ರು.ಗಳನ್ನು ನೀಡಲು ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.

ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಭೂಮಿ, ಶಾಲಾ ಮಕ್ಕಳ ಶೂ ಖರೀದಿಗೆ ಗ್ರೀನ್ ಸಿಗ್ನಲ್!ಮೈಸೂರು ವಿಮಾನ ನಿಲ್ದಾಣಕ್ಕೆ 240 ಎಕರೆ ಭೂಮಿ, ಶಾಲಾ ಮಕ್ಕಳ ಶೂ ಖರೀದಿಗೆ ಗ್ರೀನ್ ಸಿಗ್ನಲ್!

ಮೈಸೂರು ರಾಜಮನೆತನಕ್ಕೆ ಸಂದ ಗೌರವ

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಟ್ಟಿರುವುದಕ್ಕೆ ಸಾಕಷ್ಟು ಜನ ಸಂತಸ ವ್ಯಕ್ತಪಡಿಸಿದ್ದಾರೆ. ಬಹಳ ದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. "ರಾಜ್ಯ ಬಿಜೆಪಿ ಸರ್ಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಲು ನಿರ್ಧರಿಸಿದ್ದು ಸ್ವಾಗತಾರ್ಹ ಮತ್ತು ಅಭಿನಂದನೀಯ. ನಾಡಿಗೆ ಅತ್ಯಮೂಲ್ಯ ಕೊಡುಗೆ ನೀಡಿದ ಮೈಸೂರು ರಾಜಮನೆತನಕ್ಕೆ ಗೌರವ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆಗಳು" ಎಂದು ಹೇಳಿದ್ದಾರೆ.

ಶಾಸಕ ರಾಮದಾಸ್‌ ಸಂತಸ

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್ ಕೂಡ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. "ಮೈಸೂರು ಸಂಸ್ಥಾನದ ಪ್ರಭುಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತವು ಸಮಾಜಕ್ಕೆ ಮಾದರಿಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

English summary
The Government decided to Rename Mysore airport Nalvadi Krishnaraja Wodeyar Airport. People highly praised the government's decision. The cabinet meeting held on Friday under the chairmanship of Chief Minister Basavaraja Bommai approved the naming of Mysore kings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X