ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಲ್ಲಿ ಹಕ್ಕಿಜ್ವರ ಭೀತಿ ದೂರ; ಕೋಳಿ ಮಾಂಸ ಮಾರಾಟಕ್ಕೆ ಅನುಮತಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 02: ಕೆಲವೇ ದಿನಗಳ ಹಿಂದೆ ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ್ದರಿಂದ ಕೋಳಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಇದೀಗ ಮಾರಾಟದ ಮೇಲಿದ್ದ ತಾತ್ಕಾಲಿಕ ನಿಷೇಧವನ್ನು ತೆರವುಗೊಳಿಸಲಾಗಿದೆ. ಮತ್ತೆ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ಮಾರ್ಚ್ 16 ರಂದು ಮೈಸೂರಿನ ಕುಂಬಾರಕೊಪ್ಪಲು ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಕೋಳಿ ಮಾಂಸ ಮಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಜೊತೆಗೆ ಆ ಪ್ರದೇಶದ ಹಕ್ಕಿಗಳ ಸರ್ವೇ ಕಾರ್ಯವನ್ನೂ ಜಿಲ್ಲಾಡಳಿತ ನಡೆಸಿ ಹಕ್ಕಿಗಳನ್ನು ಕೊಲ್ಲಲಾಗುವುದಾಗಿ ಮಾಹಿತಿ ನೀಡಿತ್ತು.

Permission Granted For Selling Chicken In Mysuru

 ಮೈಸೂರಿನಲ್ಲಿ ಹಕ್ಕಿಜ್ವರ; ಎಷ್ಟು ಹಕ್ಕಿ, ಕೋಳಿಗಳನ್ನು ಕೊಲ್ಲಲಾಗುತ್ತಿದೆ? ಮೈಸೂರಿನಲ್ಲಿ ಹಕ್ಕಿಜ್ವರ; ಎಷ್ಟು ಹಕ್ಕಿ, ಕೋಳಿಗಳನ್ನು ಕೊಲ್ಲಲಾಗುತ್ತಿದೆ?

ಮಾ.28 ರಿಂದ ಆ ಪ್ರದೇಶದಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಮೈಸೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ವಾರದಲ್ಲಿ ಮೂರು ದಿನ (ಮಂಗಳವಾರ, ಶುಕ್ರವಾರ, ಭಾನುವಾರ) ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಕೋಳಿ ಮಾಂಸ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

English summary
As bird flu fear fade in some areas of mysuru, mahanagara palike has given permission to sell chicken
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X