ನಂಜನಗೂಡಿನಲ್ಲಿ ಬೈಕ್ ಓಡಿಸುವಾಗ ಮೊಬೈಲ್ ಸ್ಫೋಟ; ವ್ಯಕ್ತಿಗೆ ಗಾಯ
ಮೈಸೂರು, ಫೆಬ್ರವರಿ 17: ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಬೈಕ್ ಸವಾರರೊಬ್ಬರು ಬಿದ್ದು ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಕುರಿಹುಂಡಿಯ ಬಸವರಾಜು (ಬಸವಣ್ಣ) ಎನ್ನಲಾಗಿದೆ. ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ರಸ್ತೆಯಲ್ಲಿ ಕುರಿಹುಂಡಿಯಿಂದ ಹುಲ್ಲಹಳ್ಳಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಮೊಬೈಲ್ ಸಿಡಿದ ರಭಸಕ್ಕೆ ಬೈಕ್ ನಿಂದ ಅವರು ಕೆಳಗೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿದ್ದಾರೆ. ಸಾರ್ವಜನಿಕರು ಮೈಸೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೊಬೈಲ್ ಸ್ಫೋಟಗೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.












Click it and Unblock the Notifications