ಮೈಸೂರಿನಲ್ಲಿ ಪೆಟ್ರೋಲ್ ಬಂಕ್, ಬ್ಯಾಂಕ್ ವೇಳೆ ಬದಲಾವಣೆ
ಮೈಸೂರು, ಮಾರ್ಚ್ 24: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದ ಮೈಸೂರಿನಲ್ಲಿ ಪೆಟ್ರೋಲ್ ಬಂಕ್ ಹಾಗೂ ಬ್ಯಾಂಕ್ ಕೆಲಸದ ವೇಳೆ ಬದಲು ಮಾಡಲಾಗಿದೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.
ಪೆಟ್ರೋಲ್ ಬಂಕ್ ಗಳು ಮೊದಲಿನಂತೆ ಹಗಲಿರುಳೂ ತೆರೆಯುವುದಿಲ್ಲ, ಬದಲಿಗೆ ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ತೆರೆದಿರುತ್ತವೆ. ಬ್ಯಾಂಕುಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆ ಮಾತ್ರ ಕೆಲಸ ಮಾಡಲಿವೆ. ಅವಶ್ಯಕತೆ ಇದ್ದರೆ ಮಾತ್ರ ಬ್ಯಾಂಕ್‌ಗೆ ಬನ್ನಿ. ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಬೇಡಿ. ಪೊಲೀಸರಿಗೆ ನೀವು ಹೊರಗೆ ಬಂದಿರುವುದಕ್ಕೆ ಸೂಕ್ತ ಕಾರಣ ನೀಡಬೇಕು. ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆ ನೀಡಬೇಕು ಎಂದು ತಿಳಿಸಿದ್ದಾರೆ.
ಲಾಕ್ ಡೌನ್ ಮಧ್ಯೆಯೂ ತರಕಾರಿ ಕೊಳ್ಳಲು ಮುಗಿಬಿದ್ದ ಕೋಟೆನಾಡಿನ ಜನ
ಮೈದಾನಗಳಲ್ಲಿ ಯಾವುದೇ ಕ್ರೀಡಾ ಚಟುವಟಿಕೆಗೂ ಅವಕಾಶವಿಲ್ಲ. ಗುಂಪು ಗೂಡುವಿಕೆಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.