ಕೆಎಸ್ ಭಗವಾನ್ ಹತ್ಯೆಗೆ ಕೊಳ್ಳೇಗಾಲ ಕಾಡಲ್ಲಿ ತರಬೇತಿಯೂ ಮುಗಿದಿತ್ತು!
ಮೈಸೂರು, ಜೂನ್ 25 : ನಗರದ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರ ಹತ್ಯೆಗೆ ಆಯ್ಕೆ ಮಾಡಲಾಗಿದ್ದ ಹಂತಕನಿಗೆ ಕೊಳ್ಳೇಗಾಲ ಸಮೀಪದ ಕಾಡಿನಲ್ಲಿ 1 ತಿಂಗಳು ತರಬೇತಿ ನೀಡಿದ್ದ ಆಘಾತಕಾರಿ ವಿಚಾರ ಇದೀಗ ಪೊಲೀಸರ ವಿಚಾರಣೆ ವೇಳೆ ಹೊರಬಿದ್ದಿದೆ.
ಹಿಂದೂಪರ ಸಂಘಟನೆಯ ಮದ್ದೂರಿನ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನೇ ಭಗವಾನ್ ಹತ್ಯೆಗೆ ಅನಿಲ್ ಎಂಬ ಯುವಕನಿಗೆ ಸುಪಾರಿ ನೀಡಿದ್ದ ಎಂಬುದು ಈಗ ಬಹಿರಂಗಗೊಂಡಿದೆ. ಅನಿಲ್ ನನ್ನು ಭೇಟಿಯಾಗಿದ್ದ ಹೊಟ್ಟೆ ಮಂಜ, ಭಗವಾನ್ ಅವರನ್ನು ಕೊಲೆ ಮಾಡುವ ವಿಚಾರವಾಗಿ ಮನವೊಲಿಸಿ ಒಪ್ಪಿಸಿದ್ದಾನೆ.
ಆ ಬಳಿಕ ಆತನಿಗೆ ಪಿಸ್ತೂಲ್ ಬಳಸುವುದರ ತರಬೇತಿ ಕೊಡಿಸಲು ಪರಿಚಿತರ ಸಹಾಯದೊಂದಿಗೆ ಕೊಳ್ಳೇಗಾಲ ಬಳಿಯ ಕಾಡಿಗೆ ಕರೆದೊಯ್ದಿದ್ದಾನೆ. ಅಲ್ಲಿ ಒಂದು ತಿಂಗಳ ಕಾಲ ಪಿಸ್ತೂಲ್ ಬಳಕೆ ಬಗ್ಗೆ ತರಬೇತಿ ಕೊಡಿಸಿ, ವಾಪಸ್ ಕರೆ ತಂದಿದ್ದಾನೆ ಎಂಬ ಸಂಗತಿ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‍ಐಟಿ) ವಿಚಾರಣೆ ವೇಳೆ ಬಹಿರಂಗವಾಗಿದೆ.

ಪಿಸ್ತೂಲ್ ಬಳಕೆ ತರಬೇತಿ ನಂತರ ಅನಿಲ್ ಕುವೆಂಪು ನಗರದಲ್ಲಿರುವ ಭಗವಾನ್ ಅವರ ನಿವಾಸದ ಬಳಿ ಬಂದಿದ್ದ. ಸಮೀಪದ ಹೋಟೆಲ್ ಗೆ ಊಟ- ತಿಂಡಿ ನೆಪದಲ್ಲಿ ತೆರಳುತ್ತಿದ್ದ ಅನಿಲ್, ಭಗವಾನ್ ಬಗ್ಗೆ ಕೆಲವರ ಬಳಿ ಮಾತನಾಡಿ, ಸಾಕಷ್ಟು ಮಾಹಿತಿ ಕಲೆಹಾಕಿದ್ದ. ಆದರೆ ಗೌರಿ ಹತ್ಯೆ ಪ್ರಕರಣದಲ್ಲಿ ಐವರು ಪ್ರಮುಖ ಆರೋಪಿಗಳು ಸೆರೆ ಸಿಕ್ಕಿದ್ದರಿಂದ ಭಗವಾನ್ ಕೊಲೆ ಸಂಚು ಮುಂದೆ ಹೋಯಿತು ಎಂದೂ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.
ಇನ್ನು ಈ ಕುರಿತಾಗಿ ಮಾತನಾಡಿದ ಪ್ರೊ.ಕೆ. ಎಸ್.ಭಗವಾನ್, ನಾನು ಸಂವಿಧಾನ ವಿರೋಧಿ ಕೆಲಸ ಮಾಡಿಲ್ಲ. ಹಿಂದೂ ಧರ್ಮದಲ್ಲಿರುವ ತಪ್ಪುಗಳ ಬಗ್ಗೆ ಮಾತನಾಡಿದ್ದೇನೆ. ಅದನ್ನೇ ತಪ್ಪು ಎಂದುಕೊಂಡರೆ ನಾನೇನು ಮಾಡಲಾದೀತು? ಸ್ವಾಮಿ ವಿವೇಕಾನಂದ ಅವರ ವಿಚಾರಧಾರೆಗಳನ್ನು ಅನುಸರಿಸುತ್ತಿರುವ ನಾನು ಯಾರಿಗೂ ಹೆದರುವುದಿಲ್ಲ ಎಂದರು.
ಎಸ್‍ಐಟಿ ಪೊಲೀಸರು ತಮ್ಮ ಕೆಲಸವನ್ನು ದೃಢವಾಗಿ ಮಾಡುತ್ತಿದ್ದಾರೆ. ಹಂತಕರ ಪತ್ತೆಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಮುಂದೆ ಕೂಡ ತನಿಖೆಯನ್ನು ಸಮರ್ಪಕವಾದ ರೀತಿಯಲ್ಲಿ ನಡೆಸಿ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications