ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರಿಗೆ ಗೌರವದ ಮತ್ತೊಂದು ಗರಿ!
ಬೆಂಗಳೂರು, ಅ. 16: ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರು ಮತ್ತೊಂದು ಗೌರವಕ್ಕೆ ಭಾಜನರಾಗಿದ್ದಾರೆ. ಶತಮಾನೋತ್ಸವ ಸಂಭ್ರದಲ್ಲಿರುವ ಮೈಸೂರು ವಿಶ್ವವಿದ್ಯಾಲಯದ 100ನೇ ವಾರ್ಷಿಕೋತ್ಸವದಲ್ಲಿ ಸುಧಾ ಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
ಇದೇ ಅಕ್ಟೋಬರ್ 19ರಂದು ಬೆಳಗ್ಗೆ 10.30ಕ್ಕೆ ಕ್ರಾಫರ್ಡ್ ಭವನದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಮಾಧ್ಯಮದ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ, ಕುಲಾಧಿಪತಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು ಮೈಸೂರು ವಿಶ್ವವಿದ್ಯಾಲಯ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದು, ಘಟಿಕೋತ್ಸವದಲ್ಲಿ ಇದನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರೊ.ಜಿ. ಹೇಮಂತಕುಮಾರ್ ಹೇಳಿದರು.

ಈ ವಿಷಯವಾಗಿ ರಚಿಸಲಾಗಿದ್ದ ಸಮಿತಿಯು ಮೂವರು ಹೆಸರನ್ನು ಅಂತಿಮಗೊಳಿಸಿ ರಾಜ್ಯಭವನಕ್ಕೆ ಕಳುಹಿಸಿಕೊಟ್ಟಿತ್ತು. ಇದನ್ನು ಪರಿಶೀಲನೆ ಮಾಡಿದ ರಾಜ್ಯಪಾಲರು, ಗೌರವ ಡಾಕ್ಟರೇಟ್ ಪದವಿಗೆ ಕೇವಲ ಸುಧಾಮೂರ್ತಿ ಹೆಸರನ್ನು ಅನುಮೋದಿಸಿದ್ದಾರೆ. ಉಳಿದ ಇಬ್ಬರ ಹೆಸರನ್ನು ತಿರಸ್ಕರಿಸಿದ್ದು, ಆ ಇಬ್ಬರು ಹೆಸರು ಗೊತ್ತಿಲ್ಲ ಎಂದು ಕುಲಪತಿ ತಿಳಿಸಿದರು.
ಉನ್ನತ ಶಿಕ್ಷಣದಲ್ಲಿಯೂ ಮಹಿಳೆಯರದ್ದೆ ಮೇಲುಗೈ: ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ಪದವಿ ಪಡೆದುಕೊಳ್ಳುವವರ ಪೈಕಿ ಈ ಸಲವೂ ಮಹಿಳೆಯರದ್ದೇ ಪಾರುಪತ್ಯ. ಸ್ನಾತಕ, ಸ್ನಾತಕೋತ್ತರ, ಪಿಎಚ್‌ಡಿ ವಿಭಾಗದಲ್ಲೂ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. 29,018 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 18,344(ಶೇ.63.21) ಮಹಿಳೆಯರು. 10,674(ಶೇ.36.78) ಪುರುಷರು. ವಾಣಿಜ್ಯ ನಿಕಾಯದ ಎಂಬಿಎ ಅಗ್ರಿಬಿಜಿನೆಸ್ ಕೋರ್ಸ್‌ನ ಒಬ್ಬ ಅಭ್ಯರ್ಥಿಗೆ ಮಾತ್ರ ಡಿ.ಲೀಟ್ ಪದವಿ ನೀಡಲಾಗುತ್ತಿದೆ. ವಿವಿಧ ವಿಷಯಗಳಲ್ಲಿ 654 ಅಭ್ಯರ್ಥಿಗಳಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುತ್ತದೆ. ಅವರಲ್ಲಿ 264(ಶೇ.40.36) ಮಹಿಳೆಯರು ಮತ್ತು 390(ಶೇ.59.63) ಪುರುಷರು ಎಂದು ಮಾಹಿತಿ ನೀಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications