ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೈದರಾಬಾದ್ ಕುಲಪತಿಗಳ ಜತೆಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ

By ಯಶಸ್ವಿನಿ ಎಂಕೆ
|
Google Oneindia Kannada News

ಮೈಸೂರು, ಫೆಬ್ರವರಿ 19 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಬೆಳಗ್ಗೆ 11.30 ಕ್ಕೆ ಹೈದರಾಬಾದಿನ ಕುಲಪತಿ ಜತೆಗೆ ವೀಡಿಯೋ ಸಂವಾದ ನಡೆಸಲಿದ್ದಾರೆ.

ಮೈಸೂರಿಗೆ ಆಗಮಿಸಿರುವ ಮೋದಿಯವರು ಅಲ್ಲಿನ ರಾಡಿಸನ್ ಬ್ಲ್ಯೂ ಹೋಟೆಲ್ ನಲ್ಲಿ ತಂಗಿದ್ದಾರೆ. 12.30 ಕ್ಕೆ ಶ್ರವಣಬೆಳಗೊಳದತ್ತ ಪ್ರಯಾಣ ಬೆಳೆಸಲಿದ್ದು ಮಹಾ ಮಸ್ತಕಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಹಿಂದಿರುಗಲಿದ್ದಾರೆ.

ಮೈಸೂರಿಗೆ ಆಗಮಿಸಿದ ಮೋದಿ, ಸೋಮವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರಿಗೆ ಆಗಮಿಸಿದ ಮೋದಿ, ಸೋಮವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಕೇಂದ್ರ ಸರ್ಕಾರದ ನಾಲ್ಕು ಯೋಜನೆಗಳಿಗೆ ಒಂದೇ ಕಡೆ ಚಾಲನೆ ನೀಡಲಿದ್ದಾರೆ. ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಪ್ರಧಾನಿ ಮಾತನಾಡಲಿದ್ದಾರೆ. ಸಮಾವೇಶಕ್ಕೆ 1 ಲಕ್ಷ ಮಂದಿ ಭಾಗಿವಹಿಸುವ ನಿರೀಕ್ಷೆ ಇದೆ.

PM Modi will hold video conference with Vice Chancellors

ಕಾರ್ಯಕರ್ತರನ್ನು ಹೊತ್ತು ತರಲು 800 ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, 50 ಸಾವಿರ ಮಂದಿಗೆ ಭೋಜನದ ವ್ಯವಸ್ಥೆ ನಡೆದಿದೆ. ಅರವಿಂದ ಲಿಂಬಾವಳಿಯವರು ಪ್ರಧಾನಿ ಭಾಷಣವನ್ನು ಕನ್ನಡ ಅನುವಾದ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ವಾಸ್ತವ್ಯಹೂಡಲಿದ್ದಾರೆ.

In Pics: ಮೈಸೂರಿಗೆ ಆಗಮಿಸಿದ ನರೇಂದ್ರ ಮೋದಿಗೆ ಸ್ವಾಗತ ಕೋರಿದ ಸಿದ್ದರಾಮಯ್ಯ

ಪ್ರಧಾನಿ ಜೊತೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅನುಮಾನವಿದೆ. ಕೇಂದ್ರದ ಕಾರ್ಯಕ್ರಮದಲ್ಲಿ ಸಿಎಂಗೆ ಆಹ್ವಾನ‌ ನೀಡದೆ ಶಿಷ್ಟಾಚಾರ ಪಾಲಿಸಿಲ್ಲವೆಂಬ ಆರೋಪ ಕೇಳಿಬಂದಿದೆ.

English summary
Prime Minister Narendra modi will address video conference from Mysuru Radison blue hotel with vice Chancellors conference which is held in Hyderabad on Monday at 1130am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X