ಹಮ್ ಸಫರ್ ರೈಲಿಗೆ ಚಾಲನೆ ನೀಡಿದ ನರೇಂದ್ರ ಮೋದಿ
ಮೈಸೂರು, ಫೆಬ್ರವರಿ 19 : 5 ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹಮ್ ಸಫರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಹಸಿರು ನಿಶಾನೆ ತೋರಿಸಿದರು.
ಸೋಮವಾರ ಮಧ್ಯಾಹ್ನ ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೈಸೂರು ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ1ರಲ್ಲಿ ನಿರ್ಮಿಸಿದ ವಿಶೇಷ ವೇದಿಕೆಯಲ್ಲಿ ಮೋದಿ, ಮೈಸೂರು-ಉದಯ್‌ಪುರ್ ನಡುವಿನ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಈ ಸಂದರ್ಭದಲ್ಲಿದ್ದರು.
ಬೆಂಗಳೂರು-ಮೈಸೂರು ನಡುವಿನ ಜೋಡಿ ಮಾರ್ಗಕ್ಕೂ ಈ ಸಂದರ್ಭದಲ್ಲಿ ನರೇಂದ್ರ ಮೋದಿ ಚಾಲನೆ ನೀಡಿದರು. 2017ರ ನವೆಂಬರ್‌ನಲ್ಲಿ ಬೆಂಗಳೂರು-ಮೈಸೂರು ನಡುವಿನ ಜೋಡಿ ರೈಲು ಮಾರ್ಗ ಯೋಜನೆಯ ಕಾಮಗಾರಿ ಪೂರ್ಣಗೊಂಡಿತ್ತು.
1997-98ನೇ ಸಾಲಿನಲ್ಲಿ ಬೆಂಗಳೂರು-ಮೈಸೂರು ನಡುವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಚಾಲನೆ ಸಿಕ್ಕಿತ್ತು. ಮೂರು ಹಂತವಾಗಿ ಕಾಮಗಾರಿಯನ್ನು ವಿಭಜನೆ ಮಾಡಲಾಗಿತ್ತು. 2017ರಲ್ಲಿ ಕಾಮಗಾರಿ ಮುಕ್ತಾಯವಾಗಿತ್ತು.












Click it and Unblock the Notifications