ತಾಯಿ ಚಾಮುಂಡೇಶ್ವರಿಗೆ ನಮಿಸಿ ವಿವೇಕ ಸ್ಮಾರಕ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ಯುವಕರ ಕುರಿತು ಮಹತ್ವದ ಹೇಳಿಕೆ

ಮೈಸೂರು, ಆಗಸ್ಟ್‌ 1: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಆಗಸ್ಟ್‌ 1) ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಇಲ್ಲಿನ ಶ್ರೀರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ ತಾಯಿ ಚಾಮುಂಡೇಶ್ವರಿಗೆ ನಮನ ಸಲ್ಲಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದರು. ಹಾಗಾದ್ರೆ ಏನೆಲ್ಲಾ ಹೇಳಿದರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮೈಸೂರಿನ ಕಣ ಕಣದಲ್ಲೂ ಕಲೆ, ಸಂಸ್ಕೃತಿ ಮೇಳೈಸಿದೆ. ಮೈಸೂರು ಸಾಂಸ್ಕೃತಿಕ ಮತ್ತು ಐತಿಹಾಸಿಕ ಕೇಂದ್ರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕೊಂಡಾಡಿದರು. 'ನನ್ನ ಬೆಳವಣಿಗೆಯಲ್ಲಿ ರಾಮಕೃಷ್ಣ ಆಶ್ರಮದ ಪ್ರಭಾವ ಬಹಳ ಹೆಚ್ಚಿದೆ. ಮೈಸೂರು ಪವಿತ್ರ ಭೂಮಿ. ಇಲ್ಲಿನ ಎಲ್ಲಾ ಸಂತರಿಗೂ ನನ್ನ ಪ್ರಣಾಮ,' ಎಂದು ಹೇಳಿದರು.

PM Narendra Modi Mysuru Visit Inaugurates Viveka Memorial Praises Mysuru Culture and Youth

'ಮೈಸೂರು ಸಾಂಸ್ಕೃತಿಕ, ಐತಿಹಾಸಿಕ ಕೇಂದ್ರ. ದಸರಾ, ಸಂಗೀತ, ಕಲೆ ವಿಶ್ವಪ್ರಸಿದ್ಧಿ ಪಡೆದಿದೆ. ಮೈಸೂರಿನ ಕಣ ಕಣದಲ್ಲೂ ಕಲೆ, ಸಂಸ್ಕೃತಿ ಇದೆ. ರಾಷ್ಟ್ರಕವಿ ಕುವೆಂಪು ಮೈಸೂರಿನಲ್ಲಿದ್ದರು. ಅವರಿಗೂ ರಾಮಕೃಷ್ಣ ಆಶ್ರಮಕ್ಕೂ ಅವಿನಾಭಾವ ಸಂಬಂಧ ಇತ್ತು. ಜೀವನದಲ್ಲಿ ಪರೀಕ್ಷೆಗಳು ದಿನವೂ ಬರುತ್ತವೆ. ಇವುಗಳನ್ನ ಎದುರಿಸಿಕೊಂಡೇ ಸಾಧಿಸಬೇಕು. ಈ ಸಾಧನೆಗೆ ಸಂತರ ಆಶೀರ್ವಾದ, ಪ್ರೇರಣೆ ತುಂಬಾ ಮುಖ್ಯ. ಸ್ವಾಮಿ ವಿವೇಕಾನಂದರನ್ನು ಮೈಸೂರು ಮಹಾರಾಜರು ಇಲ್ಲಿದೆ ಕರೆಸಿದ್ದರು. ಅವರು ಭಾರತೀಯ ಯುವಜನರ ಚೇತನ,' ಎಂದು ಹೇಳಿದರು.

ಯುವಕರ ಬಗ್ಗೆ ಮೋದಿ ಮಹತ್ವದ ಮಾಹಿತಿ

'ವಿವೇಕ ಸ್ಮಾರಕ ಸಾಧಕರಿಗೆ ಒಂದು ಧಾನ್ಯ ಕೇಂದ್ರ. ಯುವಕರಿಗೆ ರಾಷ್ಟ್ರವೇ ಮೊದಲು. ದೇಶ ಕಟ್ಟುವ ಕೆಲಸ ಚಿಂತನೆ. ಭಾರತೀಯ ಯುವಕರು ಹಿಂದೆ ಗುಲಾಮಿ ಮನಸ್ಥಿತಿಯಲ್ಲಿ ಇದ್ದರು. ಈಗ ಯುವಕರು ಉತ್ತಮ ಮನಸ್ಥಿತಿಯಲ್ಲಿದ್ದಾರೆ. ಅವರ ಮನಸ್ಥಿತಿ ಬದಲಾದ ಹಿನ್ನೆಲೆ ಇಡೀ ದೇಶದ ಪ್ರಗತಿ ಬದಲಾಗಿದೆ. ಭಾರತ ಇವತ್ತು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಲು ಪ್ರಮುಖ ಕಾರಣ ಯುವಜನರು. ಎಲ್ಲಾ ವಲಯದಲ್ಲೂ ಯುವಸಮೂಹದ ಪ್ರಗತಿಯ ಹೆಜ್ಜೆ ಗುರುತು ಮೂಡಿಸಿದ್ದಾರೆ. ಅವರೇ ದೇಶದ ಶಕ್ತಿ ಆಗುತ್ತದೆ,' ಎಂದು ತಿಳಿಸಿದರು.

'ನಮ್ಮ ದೇಶದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿವೆ. ಕಳೆದ 12 ವರ್ಷಗಳಲ್ಲಿ ದೇಶದ ಹಲವು ವಿಶ್ವವಿದ್ಯಾಲಯಗಳು, ಸಾವಿರಾರು ಕಾಲೇಜುಗಳು, ಹಲವು ಐಐಟಿಗಳನ್ನು ಸ್ಥಾಪನೆ ಮಾಡಲಾಗಿದೆ. ಮೆಡಿಕಲ್ ಕಾಲೇಜ್ ಸಂಖ್ಯೆ ಹೆಚ್ಚಾಗಿವೆ. ಯುವಸಮೂಹಕ್ಕಾಗಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ದೊಡ್ಡಮಟ್ಟದಲ್ಲಿ ಸುಧಾರಿಸಿದ್ದೇವೆ,' ಎಂದು ತಿಳಿಸಿದರು.

ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಇನ್ನು ಸಿಎಂ ಡಿಕೆ ಶಿವಕುಮಾರ್ ಮತನಾಡಿ, ಭಾರತ ಪ್ರಗತಿ ಸಾಧಿಸಬೇಕಾದರೆ ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

'ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ ಘಳಿಗೆಯಾಗಿದೆ. ನೀವು ಸೋತಾಗ ಧೈರ್ಯವಾಗಿರಿ, ನೀವು ಗೆದ್ದಾಗ ಹೃದಯ ವೈಶಾಲ್ಯತೆ ಹೊಂದಿರಬೇಕು ಎಂದು ವಿವೇಕಾನಂದ ಅವರು ಸಂದೇಶ ನೀಡಿದ್ದಾರೆ,' ಎಂದು ತಿಳಿಸಿದರು.

'ಇಡೀ ವಿಶ್ವ ಕರ್ನಾಟಕದತ್ತ ತಿರುಗಿ ನೋಡುತ್ತಿದೆ. ಇಡೀ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗಾಗಿ ಬೆಂಗಳೂರಿಗೆ ಬಂದಾಗ, ಇಷ್ಟು ದಿನ ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುತ್ತಾರೆ ಎಂದು ಹೇಳಿದ್ದರು. ಆಗ ಇದೇ ಸಂಸ್ಥೆಯಲ್ಲಿ ಓದಿದ್ದ ಎಸ್‌ಎಂ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದರು,' ಎಂದು ಹೇಳಿದರು.

'ಇದು ಸಂಕಲ್ಪ ಭೂಮಿ. ವಿವೇಕಾನಂದರು ಮೈಸೂರಿನಿಂದ ವಿದೇಶಕ್ಕೆ ಪ್ರಯಾಣ ಮಾಡುವಾಗ ಜೇಮ್ ಷೆಡ್ ಜೀ ಟಾಟಾ ಅವರಿಗೆ ಒಂದು ಮಾತು ಹೇಳಿದ್ದರು. ಇದು ಬಡ ರಾಷ್ಟ್ರ ಇಲ್ಲಿ ವಿಜ್ಞಾನ ಸಂಸ್ಥೆಗಳು ಆರಂಭವಾಗಬೇಕು ಎಂದು ಹೇಳಿದರು. ನಂತರ ಟಾಟಾ ಅವರು ಮಹಾರಾಜರಿಗೆ ಈ ವಿಚಾರ ತಿಳಿಸಿದರು. ಬಳಿಕ ಮಹಾರಾಜರು ಬೆಂಗಳೂರಿನಲ್ಲಿ 300 ಎಕರೆ ಜಾಗ ನೀಡಿದರು. ಅಲ್ಲೇ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಪ್ರಾರಂಭ ಮಾಡಲಾಗಿದೆ. ಇದು ಈ ದೇಶದ ವಿಜ್ಞಾನಕ್ಕೆ ಮೈಸೂರು ಮಹಾರಾಜರ ಕೊಡುಗೆ,' ಎಂದು ಹೇಳಿದರು.

'ವಿವೇಕಾನಂದರ ಆಲೋಚನೆಯೇ ನಮ್ಮ ಸರ್ಕಾರದ ಆಲೋಚನೆ'

'ಇದು ಐತಿಹಾಸಿಕ ಕಾರ್ಯಕ್ರಮ. ಯುವಶಕ್ತಿ, ಯುವ ಆಲೋಚನೆ, ಯುವ ಚಿಂತನೆ. ನಾನು ನನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದ್ದೆ. ಈ ಹೊಸ ಚಿಂತನೆ ಬದಲಾವಣೆಯ ಆರಂಭ, ಯುವಕರ ಕನಸು, ದೇಶದ ಕನಸು. ನಾವು ಇಬ್ಬರು ಯುವಕರನ್ನು ಗಮನಿಸಿದ್ದೇವೆ. ಸ್ವಾಮಿ ವಿವೇಕಾನಂದ ಅವರ ಮಾರ್ಗದರ್ಶನದಲ್ಲಿ ರಾಮಕೃಷ್ಣ ವಿದ್ಯಾಶಾಲೆಯ ಎಲ್ಲಾ ಯುವ ವಿದ್ಯಾರ್ಥಿಗಳಿಗೆ ನಮನಗಳು,' ಎಂದರು.

'ನಮ್ಮ ಸರ್ಕಾರ ಕೂಡ ವಿವೇಕಾನಂದರ ಆಲೋಚನೆ ಹೊಂದಿದೆ. ಯುವ ಯುಗ, ನವ ಯುಗ ನಮ್ಮ ಸರ್ಕಾರದ ಘೋಷಣೆ. ನಾವು ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು. ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಯುವಕರು ಒಂದಾಗಬೇಕು, ಅವರ ಕಲೆ, ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯುವಕರ ಸಂಘ ಸ್ಥಾಪಿಸಲು ಮುಂದಾಗಿದ್ದೇವೆ,' ಎಂದರು.

'ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ನಮ್ಮ ಯುವಕರನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಮೂಲಕ ಯುವಕರ ಮಾನಸಿಕ ಹಾಗೂ ದೈಹಿಕ ಶಕ್ತಿ ವೃದ್ಧಿಗೆ ಕೆಲಸ ಮಾಡಬೇಕಿದೆ. ಮೈಸೂರು ಇತಿಹಾಸ, ವಿಶ್ವದ ಇತಿಹಾಸ. ವಿವೇಕಾನಂದ ಅವರು 1893ರಲ್ಲಿ ಮೈಸೂರಿನಿಂದ ಹೆಜ್ಜೆ ಹಾಕಿ, ಮಹಾರಾಜರ ಪ್ರೋತ್ಸಾಹದಿಂದ ವಿದೇಶಕ್ಕೆ ಹೋಗಿ ನನ್ನ ಸಹೋದರ, ಸಹೋದರಿಯರೇ ಎಂದು ಭಾಷಣ ಮಾಡಿ ವಿಶ್ವದ ಗಮನ ಸೆಳೆದಿದ್ದರು. ಅವರಿಗೆ ಸಹಕಾರ ಕೊಟ್ಟ ಮಹಾರಾಜರಿಗೆ ನಮನಗಳನ್ನು ಸಲ್ಲಿಸುತ್ತೇನೆ,' ಎಂದು ಸ್ಮರಿಸಿದರು.

'ವಿವೇಕಾನಂದ ಸಾಂಸ್ಕೃತಿಕ ಕೇಂದ್ರವನ್ನು ಅನಾವರಣ ಮಾಡಿದ್ದಾರೆ. ಇದು ದೇಶದ ಆಸ್ತಿ. ದೇಶದ ಯುವಕರನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಲು ಕಾರ್ಯಕ್ರಮ ರೂಪಿಸಿದ್ದಾರೆ. ಈ ಸಂಸ್ಥೆಗೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಈ ಸಂದರ್ಭದಲ್ಲಿ ಪುರಂದರ ದಾಸರ ಪದಗಳು ನೆನಪಿಗೆ ಬರುತ್ತಿವೆ. ಇದು ಭಾಗ್ಯ ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಭನಾಭನ ಪಾದ ಭಜನೆ ಪರಮ ಸುಖವಯ್ಯಾ ಎಂದು ದಾಸರು ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಮ್ಮ ಭಾಗ್ಯ,' ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+