ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್‌ ಶೋ: ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮೈಸೂರು, ಏಪ್ರಿಲ್‌ 30: ಮೈಸೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿರುವ ಮೋದಿ ರೋಡ್ ಶೋ ಮಳೆ ಕಂಟಕವಾಗಿ ಪರಿಣಮಿಸುವುದೇ ಎಂಬ ಪ್ರಶ್ನೆ ಬಿಜೆಪಿ ಕಾರ್ಯಕರ್ತರನ್ನು ಕಾಡುತ್ತಿದೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ನಗರದಲ್ಲಿ ಭಾನುವಾರ ಸಂಜೆ ನಾಲ್ಕು ಕಿ.ಮೀ. ರೋಡ್ ಶೋ ನಡೆಸಲಿದ್ದು, ಒಂದು ಲಕ್ಷ ಮಂದಿ ಸೇರುವ ನಿರೀಕ್ಷೆಯಿದೆ.

ಮೈಸೂರು ನಗರದ ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹ ರಾಜ ಕ್ಷೇತ್ರ ವ್ಯಾಪ್ತಿಯ ಪ್ರಮುಖ ರಸ್ತೆಯಾದ ರಾಜ ಮಾರ್ಗದಲ್ಲಿ ಮೋದಿ ಅವರ ರೋಡ್ ಶೋ ನಡೆಯಲಿದ್ದು, ಈ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತದಾರರಿಗೆ ಪ್ರಧಾನಿ ಮೋದಿ ಮನವಿ ಮಾಡಲಿದ್ದಾರೆ.

PM Narendra Modi Road Show Held At Mysuru

ರೋಡ್ ಶೋಗೆ ಬಿಜೆಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೆರವಣಿಗೆಯುದ್ದಕ್ಕೂ ಸಾಂಪ್ರಾಯಿಕ ಧಿರಿಸು ಧರಿಸಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜೊತೆಗೆ ಕಲಾ ತಂಡಗಳ ಪ್ರದರ್ಶನ ಆಯಾ ಕಟ್ಟಿನ ಸ್ಥಳಗಳಲಿ ನಡೆಯಲಿದೆ. ಭಾನುವಾರ ಸಂಜೆ 5.30 ರೋಡ್ ಶೋ ಆರಂಭವಾಗಲಿದ್ದು, ಮೂರು ಕ್ಷೇತ್ರಗಳಲ್ಲಿ ನಡೆಯಲಿದೆ. ಭಾನುವಾರ ರಜಾ ದಿನವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಅದರಲ್ಲೂ ಯುವ ಮತದಾರರು ಸೇರುವ ನಿರೀಕ್ಷೆ ಇದೆ.

ನಮೋ ರೋಡ್‌ ಶೋಗೆ ಸಕಲ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಎಸ್‌ಪಿಜಿ ಅಧಿಕಾರಿಗಳ ಸಲಹೆ ಮೇರೆಗೆ ಪೊಲೀಸರು ಜಂಬೂಸವಾರಿ ಮಾರ್ಗದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುತ್ತಿದ್ದಾರೆ. ಅರಮನೆ ದಕ್ಷಿಣ ದ್ವಾರದ ಕಾಡಾ ಕಚೇರಿ (ಪಾಲಿಕೆ ಕಚೇರಿ)ಯಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆಯ ಸರಕಾರಿ ಆಯುರ್ವೇದ ಕಾಲೇಜು ಜಂಕ್ಷನ್‌ವರೆಗೆ ಇರುವ ಇಕ್ಕೆಲಗಳ ಕಲ್ಲಿನ ಬ್ಯಾರಿಕೇಡ್‌ಗೆ ಫುಟ್‌ಪಾತ್‌ನಿಂದ ಯಾರೂ ರಸ್ತೆಗೆ ಸುಳಿಯದಂತೆ ಜಾಲರಿಯನ್ನು ಅಳವಡಿಸಲಾಗುತ್ತಿದೆ.

PM Narendra Modi Road Show Held At Mysuru

ಓವಲ್ ಮೈದಾನದ ಮುಖ್ಯದ್ವಾರ ಹೊರತುಪಡಿಸಿ ಉಳಿದೆಲ್ಲಾ ಪ್ರವೇಶಗಳನ್ನು ಬಂದ್ ಮಾಡಬೇಕು. ಸುತ್ತಲಿನ ಮರಗಳ ಒಣಗಿದ ರೆಂಬೆ ತೆರವುಗೊಳಿಸಿ ಆವರಣವನ್ನು ಶುಚಿಯಾಗಿಡಬೇಕು. ವಾಹನ ನಿಲುಗಡೆಗೆ ದೂರದಲ್ಲಿ ವ್ಯವಸ್ಥೆ ಮಾಡಬೇಕು. ಬನ್ನಿಮಂಟಪದ ಎಲ್‌ಐಸಿ ವೃತ್ತದವರೆಗೆ ರಾಜಮಾರ್ಗದಲ್ಲಿ ಬ್ಯಾರಿಕೇಡ್ ನಿರ್ಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‌ಪಿಜಿ ಹಿರಿಯ ಅಧಿಕಾರಿಗಳು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹಾಗೂ ಕಾನೂನು ಸುವ್ಯವಸ್ಥೆ ಡಿಸಿಪಿ ಎಂ. ಮುತ್ತುರಾಜ್ ಅವರಿಗೆ ತಿಳಿಸಿದರು.

ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ರಸ್ತೆ ಮಾರ್ಗದ ಇಕ್ಕೆಲಗಳಲ್ಲಿ ದಸರಾ ಮಾದರಿಯಲ್ಲಿ ಮರದ ಬಂಬುಗಳಿಂದ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ರೋಡ್ ಶೋ ಸಂಜೆಯಾದ ಕಾರಣ ರಸ್ತೆ ಬಳಿ ಇರುವ ಮರಗಳಿಗೆ ಪೋಕಸ್ ಲೈಟ್ ಅಳವಡಿಸಲಾಗುತ್ತಿದೆ. ಎಲ್‌ಐಸಿ ವೃತ್ತದಿಂದ ಮೈಸೂರು- ಬೆಂಗಳೂರು ರಸ್ತೆ, ಮಣಿಪಾಲ್ ಆಸ್ಪತ್ರೆ ಜಂಕ್ಷನ್, ನಾರಾಯಣ ಹೃದಯಾಲಯ, ದೇವೇಗೌಡ ವೃತ್ತ, ತಿ.ನರಸೀಪುರ ರಸ್ತೆ ಜಂಕ್ಷನ್‌ಗೆ ಎಸ್‌ಪಿಜಿ ಅಧಿಕಾರಿಗಳು ತೆರಳಿ ಭದ್ರತಾ ಕ್ರಮಗಳನ್ನು ಪರಿಶೀಲಿಸಿದರು. ನಂತರ ವಿಮಾನ ನಿಲ್ದಾಣದಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಏರ್‌ಪೋರ್ಟ್ ನಿರ್ದೇಶಕ ಆರ್. ಮಂಜುನಾಥರೊಂದಿಗೆ ಸಭೆ ನಡೆಸಿ ಕೆಲ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದರು.

ಸಂಚಾರ ನಿರ್ಬಂಧಿಸಿರುವ ಮಾರ್ಗಗಳು

ಕೌಟಿಲ್ಯ ವೃತ್ತದಿಂದ ಮುಡಾ ಜಂಕ್ಷನ್‌ವರೆಗಿನ ರಾಧಾಕೃಷ್ಣ ಮಾರ್ಗ, ಮುಡಾ ಜಂಕ್ಷನ್‌ನಿಂದ ರಾಮಸ್ವಾಮಿ ವೃತ್ತದವರೆಗಿನ ಜೆ.ಎಲ್.ಬಿ ರಸ್ತೆ, ರಾಮಸ್ವಾಮಿ ವೃತ್ತದಿಂದ ಗನ್‌ಹೌಸ್ ವೃತ್ತದವರೆಗಿನ ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತದಿಂದ ಹೈವೆ ವೃತ್ತದವರೆಗಿನ ಸಯ್ಯಾಜಿರಾವ್ ರಸ್ತೆ, ಹೈವೆ ವೃತ್ತದಿಂದ ಎಲ್‌ಐಸಿ ವೃತ್ತದವರೆಗಿನ ನೆಲ್ಸನ್ ಮಂಡೇಲಾ ರಸ್ತೆ, ಎಲ್‌ಐಸಿ ವೃತ್ತದಿಂದ ಕೆಂಪೇಗೌಡ ವೃತ್ತದವರೆಗಿನ ಹಳೆ ಮೈಸೂರು-ಬೆಂಗಳೂರು ರಸ್ತೆ. ಕೆಂಪೇಗೌಡ ವೃತ್ತದಿಂದ ಮೈಸೂರು ವಿಮಾನ ನಿಲ್ದಾಣದವರೆಗಿನ ರಿಂಗ್ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+