PM Modi : ಏ.9ಕ್ಕೆ ಕರ್ನಾಟಕಕ್ಕೆ ಮೋದಿ ಭೇಟಿ; ಬಂಡೀಪುರದಲ್ಲಿ ಸಫಾರಿ

ಮೈಸೂರು, ಮಾರ್ಚ್ 31; ಭಾರತದ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್‌ನಲ್ಲಿ ಮತ್ತೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ, ಮೇ 10ರಂದು ಚುನಾವಣೆ ನಡೆಯಲಿದೆ. ಆದರೆ ಮೋದಿ ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸುತ್ತಿಲ್ಲ.

ಏಪ್ರಿಲ್ 13ರಂದು ಕರ್ನಾಟಕದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಬಂಡೀಪುರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

PM Narendra Modi to Visit Bandipur Tiger Reserve on April 9

ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಮತ್ತು ಬೆಳ್ಳಿ ನಾಣ್ಯದ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.

ಮೈಸೂರಿನಲ್ಲಿ ಕಾರ್ಯಕ್ರಮ; ಮೈಸೂರು ನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಮತ್ತು ಬೆಳ್ಳಿ ನಾಣ್ಯದ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ. ಬಳಿಕ ಬಂಡೀಪುರಕ್ಕೆ ತೆರಳಿ ಸಫಾರಿ ನಡೆಸಲಿದ್ದಾರೆ. ಬಂಡೀಪುರದ ಸಫಾರಿ ರಸ್ತೆಗಳನ್ನು ರಿಪೇರಿ ಮಾಡುವ ಕಾರ್ಯವನ್ನು ಈಗಾಗಲೇ ಕೈಗೊಳ್ಳಲಾಗಿದೆ.

PM Narendra Modi to Visit Bandipur Tiger Reserve on April 9

ಹಿರಿಯ ಅಧಿಕಾರಿಗಳು ಬಂಡೀಪುರಕ್ಕೆ ಭೇಟಿ ನೀಡಿ ಈಗಾಗಲೇ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತಿದೆ. ದೇಶದ ಜನಪ್ರಿಯ ಮತ್ತು ಹುಲಿ ಯೋಜನೆಯ ಮೊದಲ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಡೀಪುರವು ಒಂದಾಗಿದೆ. 1973ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ 9 ಹುಲಿ ಸಂರಕ್ಷಿತ ಪ್ರದೇಶಗಳನ್ನು ಘೋಷಣೆ ಮಾಡಿದರು. ಇದರಲ್ಲಿ ಬಂಡೀಪುರವೂ ಸೇರಿತ್ತು. ಆಗ ಬಂಡೀಪುರದಲ್ಲಿ 9 ಹುಲಿಗಳು ಇದ್ದವು. ಬಂಡೀಪುರದಲ್ಲಿ ಸಫಾರಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಮಾರ್ಚ್‌ 25ರ ಶನಿವಾರ ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆಗೆ ಆಗಮಿಸಿದ್ದ ನರೇಂದ್ರ ಮೋದಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮಾರ್ಚ್ 29ರಂದು ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ. ಆದರೆ ಇದು ಚುನಾವಣಾ ಪ್ರಚಾರ ಕಾರ್ಯಕ್ರಮವಲ್ಲ.

ಹುಲಿ ಸಂಖ್ಯೆಯಲ್ಲಿ ರಾಜ್ಯವೇ ಮೊದಲು; ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9ರಂದು 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. 2018ರಲ್ಲಿ ನಡೆದ ಹುಲಿಗಣತಿ ಪ್ರಕಾರ ಕರ್ನಾಟಕದಲ್ಲಿ 524 ಮತ್ತು ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ದವು. 2022ರಲ್ಲಿ ಮತ್ತೆ ಹುಲಿ ಗಣತಿ ನಡೆದಿದೆ. ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಅಧಿಕವಾಗಿದ್ದು, ದೇಶದಲ್ಲಿ ಹುಲಿಗಳು ಇರುವ ಸಂಖ್ಯೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆ ಇದೆ.

All India Tiger Estimation (AITE) ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಹುಲಿಗಳ ಗಣತಿ ನಡೆಸುತ್ತದೆ. ಕರ್ನಾಟಕ ಮತ್ತು ಮಧ್ಯ ಪ್ರದೇಶ ರಾಜ್ಯಗಳಲ್ಲಿ ದೇಶದಲ್ಲಿಯೇ ಅತ್ಯಧಿಕ ಹುಲಿಗಳಿವೆ. 2006ರ ಗಣತಿಯಲ್ಲಿ ಮಧ್ಯಪ್ರದೇಶದಲ್ಲಿ 300 ಮತ್ತು ಕರ್ನಾಟಕದಲ್ಲಿ 290 ಹುಲಿಗಳು ಇದ್ದವು. 2010ರ ಗಣತಿ ಪ್ರಕಾರ ಮಧ್ಯ ಪ್ರದೇಶದಲ್ಲಿ 257 ಮತ್ತು ಕರ್ನಾಟಕದಲ್ಲಿ 300 ಹುಲಿಗಳು ಇದ್ದವು. 2014ರ ಗಣತಿಯಂತೆ ಮಧ್ಯ ಪ್ರದೇಶದಲ್ಲಿ 526 ಮತ್ತು ಕರ್ನಾಟಕದಲ್ಲಿ 524 ಹುಲಿಗಳಿದ್ದವು. ಕರ್ನಾಟಕ ಮತ್ತು ಮಧ್ಯ ಪ್ರದೇಶ ರಾಜ್ಯಗಳು ಹೊರತುಪಡಿಸಿದರೆ ಉತ್ತರಾಖಂಡ ರಾಜ್ಯದಲ್ಲಿ ಹೆಚ್ಚು ಹುಲಿಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+