PM Narendra Modi: ಕೆಲವೇ ಕ್ಷಣಗಳಲ್ಲಿ ದಕ್ಷಿಣಕಾಶಿ ನಂಜನಗೂಡಿಗೆ "ನಮೋ" ಭೇಟಿ, ಸಿದ್ಧತೆ ಹೇಗಿದೆ?, ಇಲ್ಲಿದೆ ಮಾಹಿತಿ
ಮೈಸೂರು, ಮೇ, 07: ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿಗೆ ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.
ನಂಜನಗೂಡು ತಾಲೂಕಿನ ಎಲಚಗೆರೆ ಗ್ರಾಮದಲ್ಲಿ ಬಿಜೆಪಿ ಸಮಾವೇಶ ನಡೆಯಲಿರುವ ಸ್ಥಳದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೆಯೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ 17 ಮಂದಿ ಅಭ್ಯರ್ಥಿಗಳೂ ಸೇರಿದಂತೆ ಒಟ್ಟು 33 ಮಂದಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೆಲಿಪ್ಯಾಡ್ ಆವರಣದಿಂದ ವೇದಿಕೆಗೆ ತೆರಳುವ ವೇಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಜಾನಪದ ಸಂಸ್ಕೃತಿಯನ್ನು ಬಿಂಬಿಸುವ ಕಲಾವಿದರು ಕಲಾ ಪ್ರದರ್ಶನಗಳೊಂದಿಗೆ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಸಮಾವೇಶದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಭಾಗಿ ಆಗಲಿದ್ದಾರೆ.
ಸಮಾವೇಶದ ಆರಂಭಕ್ಕೂ ಮುನ್ನ 3 ಸಾವಿರ ಬೈಕ್‌ಗಳಲ್ಲಿ ಕಾರ್ಯಕರ್ತರು ರ್‍ಯಾಲಿಯಲ್ಲಿ ಆಗಮಿಸಲಿದ್ದಾರೆ. ಅಲ್ಲದೆ ವಾಹನಗಳ ನಿಲುಗಡೆಗಾಗಿ 14 ಪ್ರದೇಶಗಳನ್ನು ಗುರುತಿಸಲಾಗಿದೆ. ವಿಶೇಷವಾಗಿ ಸಮಾವೇಶ ನಡೆಯುವ ಸ್ಥಳದಲ್ಲಿ ಕಳೆದ 9 ವಷರ್ಗಳ ಅವಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಾವಧಿಯ ಸಾಧನೆಗಳನ್ನು ಬಿಂಬಿಸುವ ಭಿತ್ತಿ ಚಿತ್ರಗಳ ಪ್ರದರ್ಶನ ಮಾಡಲಾಗುವುದು ಎಂದರು.
ಜೊತೆಗೆ ಸಮಾವೇಶದಲ್ಲಿ ಭಾಗಿಯಾಗುವ 2 ಸಾವಿರ ಯುವಕರಿಗೆ ಸ್ಥಳದಲ್ಲೇ ಟ್ಯಾಟು ಹಾಕುವುದು ಹಾಗೂ 2 ಸಾವಿರ ಮಹಿಳೆಯರಿಗೆ ಮೆಹಂದಿ ಹಾಕಲಾಗುವುದು. ಹಾಗೆಯೆ ಸುಮಾರು 500ಕ್ಕೂ ಹೆಚ್ಚು ಮಂದಿ ಸ್ವಯಂ ಸೇವಕರು ಸೇವಾ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ ಎಂದರು.
ಮೋದಿಗೆ ನೀಡುವ ನೆನಪಿನ ಕಾಣಿಕೆ ಸಿದ್ಧ
ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸ್ಥಳೀಯ ಜಾನಪದ ಕಲಾ ಸಂಸ್ಕೃತಿಯ ಮೂಲಕ ಅದ್ಧೂರಿ ಸ್ವಾಗತ ಮಾಡಲಾಗುತ್ತದೆ. ಇದರೊಂದಿಗೆ ಶಿವನ ರೂಪ ಆಗಿರುವ ಲಿಂಗವನ್ನು ನೆನಪಿನ ಕಾಣಿಕೆಯಾಗಿ ಶಾಸಕ ಬಿ.ಹಷರ್ವರ್ಧನ್ ಅವರು ಪ್ರಧಾನಿ ಅವರಿಗೆ ನೀಡಲಿದ್ದಾರೆ ಎಂದರು.
ಮೋದಿ ಭೇಟಿ ನೀಡಲಿರುವ ಸ್ಥಳಗಳು
ಸಂಜೆ 4:25ಕ್ಕೆ ನಂಜನಗೂಡಿನ ಎಲಚಗೆರೆಗೆ ಆಗಮಿಸುವ ಮೋದಿಯವರು 5:30ರವರೆಗೆ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ರಸ್ತೆ ಮೂಲಕ ನಂಜನಗೂಡು ನಗರಕ್ಕೆ ತೆರಳಿ 5:45ಕ್ಕೆ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ದೇಗುಲ ಭೇಟಿ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ "ಉತ್ತರದ ಕಾಶಿಯಿಂದ ದಕ್ಷಿಣದ ಕಾಶಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ" ಎಂಬ ಆಕಷರ್ಕ ಚಿತ್ರಣದ ಮೂಲಕ ಸ್ವಾಗತಿಸಲಾಗುವುದು ಎಂದರು.
ನಂತರ ಪ್ರಧಾನಿ ಮೋದಿ ಅವರು ದೇವಸ್ಥಾನದಿಂದ ರಸ್ತೆ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ನವದೆಹಲಿಗೆ ತಲುಪಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಹಾರ ರಾಜ್ಯಸಭಾ ಸದಸ್ಯ ವಿವೇಕ್ ಠಾಕೂರ್, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮೈ.ವಿ.ರವಿಶಂಕರ್, ಸುರೇಶ್ ಬಾಬು ಸೇರಿಂದಂತೆ ಮತ್ತಿತರರು ಉಪಸ್ಥಿತರಿದ್ದರು.
ಈಗಾಗಲೇ ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂಜೆ 4 ಗಂಟೆ ಸುಮಾರಿಗೆ ನಂಜನಗೂಡಿನಲ್ಲೂ ಕೂಡ ಪ್ರಚಾರದ ರಣಕಹಳೆಯನ್ನು ಮೊಳಗಿಸಲಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications