ಸುಳ್ವಾಡಿ ವಿಷಪ್ರಸಾದ ಪ್ರಕರಣ: ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ 6 ಜನರು ಮತ್ತೆ ಅಸ್ವಸ್ಥ

ಮೈಸೂರು, ಜನವರಿ 10: ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ಡಿ.14ರಂದು ವಿಷಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದವರಲ್ಲಿ 6 ಮಂದಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹನೂರು ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮಲ್ಲಿಗಾ, ಕಮಲ, ವೀರಮ್ಮ, ರೇಖಾ ಮತ್ತು ಪಳನಿಯಮ್ಮ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷಮಿಶ್ರಿತ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಆದರೆ ಮಂಗಳವಾರ ರಾತ್ರಿ ಕಾಣಿಸಿಕೊಂಡ ತೀವ್ರ ಹೊಟ್ಟೆ ನೋವು ಮತ್ತು ಹೊಟ್ಟೆ ಉರಿಯಿಂದ ಪುನಃ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ 6 ಮಂದಿ ಮಹಿಳೆಯರನ್ನು ಒಂದೇ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Poison Prasada Case:6 people again hospitalized

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ವೇಣುಗೋಪಾಲ್ ಈ ಕುರಿತು ಮಾತನಾಡಿ, ಸುಳ್ವಾಡಿ ದುರಂತದಲ್ಲಿ ಅಸ್ವಸ್ಥಗೊಂಡಿದ್ದವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯ ಸುಧಾರಣೆಯಾದ ಬಳಿಕ ಸ್ವಗ್ರಾಮಕ್ಕೆ ಹಿಂತಿರುಗಿದ್ದರು.

ಆದರೆ ಮಂಗಳವಾರ ರಾತ್ರಿ ಎಂ.ಜಿ.ದೊಡ್ಡಿಯ 6 ಮಂದಿಗೆ ವಿಪರೀತ ಜ್ವರ, ವಾಂತಿ-ಬೇಧಿ, ಹೊಟ್ಟೆ ನೋವು, ಹೊಟ್ಟೆ ಉರಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆ ದಾಖಲಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+