ನೀರು ಕೇಳುವ ನೆಪದಲ್ಲಿ ಬಂದು ಇವರು ಮಾಡಿದ್ದು ಈ ಕೆಲಸ!
ಮೈಸೂರು, ನವೆಂಬರ್ 23: ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದು ಚಾಕು ತೋರಿಸಿ 25 ಸಾವಿರ ನಗದು, ಮೊಬೈಲ್ ಕಸಿದು ಪರಾರಿಯಾಗಿದ್ದ ಕಳ್ಳರನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 22ರಂದು ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಗ್ರಾಮದ ಬಳಿ ವರ್ಗೀಸ್ ಎಂಬುವರ ತೋಟದ ಮನೆಗೆ ನೀರು ಕೇಳುವ ನೆಪದಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಎಚ್.ಡಿ.ಕೋಟೆ ತಾಲೂಕಿನ ವಿವಿಧ ಗ್ರಾಮದ ನಿವಾಸಿಗಳಾದ ಅಕ್ಬರ್ ಖಾನ್, ಚಂದ್ರು, ಇಸಾಕ್ ಅಹಮ್ಮದ್, ನಂಜುಂಡಮೂರ್ತಿ ಅಶೋಕ್ ಹಾಗೂ ಪ್ರಸಾದ್ ಕುಮಾರ್ ಬಂಧಿತರು. ಬಂಧಿತರಿಂದ ನಗದು, ಮೊಬೈಲ್, ದರೋಡೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ, ಒಂದು ಬೈಕ್, ಒಂದು ಆಟೋ ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಘಟನೆ ಕುರಿತು ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.












Click it and Unblock the Notifications