ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀರು ಕೇಳುವ ನೆಪದಲ್ಲಿ ಬಂದು ಇವರು ಮಾಡಿದ್ದು ಈ ಕೆಲಸ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 23: ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದು ಚಾಕು ತೋರಿಸಿ 25 ಸಾವಿರ ನಗದು, ಮೊಬೈಲ್ ಕಸಿದು ಪರಾರಿಯಾಗಿದ್ದ ಕಳ್ಳರನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.

ದಾರಿ ಮಧ್ಯೆ ಗಾಡಿ ನಿಲ್ಲಿಸಿ ಸಿಲಿಂಡರ್ ನಿಂದ ಗ್ಯಾಸ್ ಕದಿಯುತ್ತಿದ್ದ ಸಿಬ್ಬಂದಿದಾರಿ ಮಧ್ಯೆ ಗಾಡಿ ನಿಲ್ಲಿಸಿ ಸಿಲಿಂಡರ್ ನಿಂದ ಗ್ಯಾಸ್ ಕದಿಯುತ್ತಿದ್ದ ಸಿಬ್ಬಂದಿ

ನವೆಂಬರ್ 22ರಂದು ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಗ್ರಾಮದ ಬಳಿ ವರ್ಗೀಸ್ ಎಂಬುವರ ತೋಟದ ಮನೆಗೆ ನೀರು ಕೇಳುವ ನೆಪದಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗಿದ್ದರು. ಎಚ್.ಡಿ.ಕೋಟೆ ತಾಲೂಕಿನ ವಿವಿಧ ಗ್ರಾಮದ ನಿವಾಸಿಗಳಾದ ಅಕ್ಬರ್ ಖಾನ್, ಚಂದ್ರು, ಇಸಾಕ್ ಅಹಮ್ಮದ್, ನಂಜುಂಡಮೂರ್ತಿ ಅಶೋಕ್ ಹಾಗೂ ಪ್ರಸಾದ್ ಕುಮಾರ್ ಬಂಧಿತರು. ಬಂಧಿತರಿಂದ ನಗದು, ಮೊಬೈಲ್, ದರೋಡೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ, ಒಂದು ಬೈಕ್, ಒಂದು ಆಟೋ ವಶಪಡಿಸಿಕೊಳ್ಳಲಾಗಿದೆ.

Police Arrested Thieves Who Robbed Mobile And Money In Mysuru

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಘಟನೆ ಕುರಿತು ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

English summary
Police have arrested thieves who came by asking water and robbed 25,000 cash and mobile in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X